ಕರ್ನಾಟಕ ಜಾನಪದ ಪರಿಷತ್ತು; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 04: ಕರ್ನಾಟಕ ಜಾನಪದ ಪರಿಷತ್ತು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15/11/2020 ಕೊನೆಯ ದಿನವಾಗಿದೆ.
ರಾಮನಗರದಲ್ಲಿರುವ ಜಾನಪದ ಲೋಕದಲ್ಲಿ ಕಾರ್ಯ ನಿರ್ವಹಣೆ ಮಾಡಲು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಕ್ಯೂರೇಟರ್ ಹುದ್ದೆ (1): ಕ್ಯುರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಸಂಸ್ಕೃತಿ ಅಥವ ದಕ್ಷಿಣ ಭಾರತೀಯ ಅಧ್ಯಯನಗಳು ಅಥವ ಸಂಸ್ಕೃತ ಅಥವಾ ಪುರಾತತ್ವವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಸ್ನಾತಕೋತ್ತರ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 25 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಕನಿಷ್ಠ 2 ವರ್ಷ ಸರ್ಕಾರಿ/ ಅರೆ ಸರ್ಕಾರಿ/ ಖಾಸಗಿ ಸಂಸ್ಥೆಯ ವಸ್ತು ಸಂಗ್ರಹಾಲಯದಲ್ಲಿ ಕ್ಯುರೇಷನ್ ಅನುಭವ ಇರಬೇಕು.
ರಂಗ ಸಹಾಯಕರು: ಪದವಿ ಶಿಕ್ಷಣ ಪಡೆದಿದ್ದು, ರಂಗ ತರಬೇತಿ ಶಿಕ್ಷಣದಲ್ಲಿ ಡಿಪ್ಲೊಮಾ ಪಡೆದಿರಬೇಕು ಅಥವ ತತ್ಸಮಾನ ಶಿಕ್ಷಣವನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವವರಿಗೆ 25 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ರಂಗ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ: ಕರ್ನಾಟಕ ಜಾನಪದ ಪರಿಷತ್ತು, ಜಾನಪದ ಸಿರಿಭುವನ, ನಂ 1, ಜಲದರ್ಶಿನಿ ಬಡಾವಣೆ, ಹೊಸ ಬಿಇಎಲ್ ರಸ್ತೆ, ಬೆಂಗಳೂರು 560054.
ಹೆಚ್ಚಿನ ಮಾಹಿತಿ, ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications