ಕರ್ನಾಟಕ ವಿಧಾನಪರಿಷತ್ತಿನಲ್ಲಿ ಕೆಲಸ ಖಾಲಿ ಇದೆ

Posted By:
Subscribe to Oneindia Kannada

ಬೆಂಗಳೂರು, ಜನವರಿ 25 : ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳನ್ನು ಜನವರಿ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿಧಾನಪರಿಷತ್ ವರದಿಗಾರರು (ಕನ್ನಡ, ಆಂಗ್ಲ), ವಾಹನ ಚಾಲಕರು, ಗ್ರೂಪ್ 'ಡಿ'ನೌಕರರರು ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆ - 1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಸಲ್ಲಿಸಬೇಕಾಗಿದೆ. [ಕೆಎಸ್ಆರ್ ಟಿಸಿ ನೇಮಕಾತಿ : ಅರ್ಜಿ ಸಲ್ಲಿಸಲು ಫೆ.4 ಕೊನೆ ದಿನ]

legislative council

ಅರ್ಜಿ ಶುಲ್ಕ : ಪ.ಜಾ/ಪ.ಪಂ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಕನ್ನಡ/ಆಂಗ್ಲ ವರದಿಗಾರರು ಮತ್ತು ವಾಹನ ಚಾಲಕರ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 300 ರೂ. ಹಾಗೂ ಡಿ ಗ್ರೂಪ್ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ 150 ರೂ.ಗಳ ಡಿಡಿ ಅಥವ ಪೇ ಅರ್ಡ್‌ರ್‌ ಅನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಪರಿಷತ್ ಸಚಿವಾಲಯ, ಅಂಚೆಪೆಟ್ಟಿಗೆ ಸಂಖ್ಯೆ 5079, ವಿಧಾನಸೌಧ, ಬೆಂಗಳೂರು 560001 ವಿಳಾಸಕ್ಕೆ ಪಾವತಿ ಮಾಡಬೇಕು. [ಪೊಲೀಸ್ ಇಲಾಖೆ ನೇಮಕಾತಿ ವಿವರಗಳು]

ವಿದ್ಯಾರ್ಹತೆ : ಆಂಗ್ಲ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿವಿಯಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಆಂಗ್ಲ ಶೀಘ್ರಲಿಪಿ ಪ್ರವೀಣ ದರ್ಜೆ ಹಾಗೂ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. [ಮೆಸ್ಕಾಂ ನೇಮಕಾತಿ, ಅರ್ಜಿ ಸಲ್ಲಿಕೆಗೆ ಫೆ.15 ಕೊನೆ ದಿನ]

ಕನ್ನಡದ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಲ್ಲಿಸುವವರು ಅಂಗೀಕೃತ ವಿವಿಯಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಕನ್ನಡ ಶೀಘ್ರಲಿಪಿ ಪ್ರವೀಣ ದರ್ಜೆ ಹಾಗೂ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಾಹನ ಚಾಲಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಥಮ ಚಿಕಿತ್ಸಾ ಪ್ರಮಾಣ ಪತ್ರವನ್ನು ಹೊಂದಿರಬೇಕು. ಮೋಟಾರು ಕಾರು/ ಭಾರಿ ವಾಹನ ಚಾಲನಾ ಪರಿಣಿತಿಯನ್ನು ಹೊಂದಿರತಕ್ಕದ್ದು. ವಾಹನ ಚಾಲನಾ ಪರಿಣಿತಿಯ ಬಗ್ಗೆ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು. ಸೆಕ್ಯೂರಿಟಿ ಗಾರ್ಡ್ ಮತ್ತು ಗ್ರೂಪ್ 'ಡಿ' ಹುದ್ದೆಗೆ ಅರ್ಜಿ ಸಲ್ಲಿಸುವವರು 7ನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಗೊಳಿಸಲಾಗಿದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ಅರ್ಜಿ ಸಲ್ಲಿಸಲು ವಿಳಾಸ : ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5079 ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು -560001.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karanatka Legislative Council invited application for various posts. January 30, 2016 last date for submit application.
Please Wait while comments are loading...