ವಿಧಾನ ಪರಿಷತ್ ಸಚಿವಾಲಯ ನೇಮಕಾತಿ: ಹುದ್ದೆ, ವೇತನ ವಿವರ
ಬೆಂಗಳೂರು, ಡಿಸೆಂಬರ್ 03: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿತ್ತು. ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ 3/1/2025ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
ವಿಧಾನ ಪರಿಷತ್ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ದಿನಾಂಕ 12.03.2024ರಂದು ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿ ಕಿರಿಯ ಸಹಾಯಕರ ಉಳಿಕೆ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಹುದ್ದೆ, ವೇತನ ವಿವರ: ಹುದ್ದೆಯ ಹೆಸರು ಕಿರಿಯ ಸಹಾಯಕರು. ಒಟ್ಟು ಹುದ್ದೆಗಳ ಸಂಖ್ಯೆ 7. ಉಳಿಕೆ ಮೂಲ ವೃಂದ 6 ಹುದ್ದೆಗಳು, ಕಲ್ಯಾಣ-ಕರ್ನಾಟಕ 1 ಹುದ್ದೆ. ನೇರ ನೇಮಕಾತಿಯ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವೇತನ ಶ್ರೇಣಿ 34100-800-35700-900-39300-1000-43300-1125-47800-1250-52800-1375-58300-1500-64300-1650-67600 ರೂ.ಗಳು.
ಹುದ್ದೆಗಳ ಮೀಸಲಾತಿ ಹೀಗಿದೆ. ಪರಿಶಿಷ್ಟ ಜಾತಿ ಇತರೆ 1. ಸಾಮಾನ್ಯ ಮಹಿಳೆ 1, ಗ್ರಾಮೀಣ 1 ಒಟ್ಟು 2. ಪರಿಶಿಷ್ಟ ಪಂಗಡ ಇತರೆ 1, ಪ್ರವರ್ಗ -1 1, ಪ್ರವರ್ಗ 2ಎ 1. ಕಲ್ಯಾಣ ಕರ್ನಾಟಕ ಪರಿಶಿಷ್ಟ ಜಾತಿ ಇತರೆ 1.
ದಿನಾಂಕ 12/3/2024ರಂದು ಹೊರಡಿಸಿರುವ ಅಧಿಸೂಚನೆಯಲ್ಲಿನ ಎಲ್ಲಾ ಹುದ್ದೆಗಳಿಗೆ ಹಾಗೂ ಮೇಲ್ಕಂಡ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಪರಿಷ್ಕೃತ ದಿನಾಂಕಗಳು. ಅರ್ಜಿ ಸಲ್ಲಿಕೆ ಪ್ರಾರಂಭಿಸುವ ದಿನಾಂಕ 4/12/2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3/1/2025, ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 4/1/2025.
12/3/2024ರ ಅಧಿಸೂಚನೆ ವಯೋಮಿತಿ ಸಡಿಲಿಕೆ ಕೋಷ್ಠಕದಲ್ಲಿ ನಮೂದಿಸಿರುವ ಗರಿಷ್ಠ ವಯೋಮಿತಿಗೆ 2 ವರ್ಷಗಳ ಸಡಿಲಿಕೆ ನೀಡಲಾಗಿದೆ ಎಂಬುದರ ಬದಲು 3 ವರ್ಷದ ಸಡಿಲಿಕೆ ನೀಡಲಾಗಿದೆ. ಉಳಿದಂತೆ ನೇಮಕಾತಿ ಅಧಿಸೂಚನೆಯಲ್ಲಿ ನಿಗದಿ ಪಡಿಸಿದ ಅರ್ಹತೆ, ಸೂಚನೆ, ನಿಬಂಧನೆ, ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಭ್ಯರ್ಥಿಗಳಿಗೆ ಸ್ಪಷ್ಟಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ http://kea.kar.nic.in ಅಥವ https://cetonline.karnataka.gov.in/kea ವೆಬ್‌ಸೈಟ್‌ಗೆ ಭೇಟಿ ನೀಡಿ.
ಗುತ್ತಿಗೆ ಆಧಾರದ ಮೇಲೆ ನೇಮಕಾತಿ: ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇಲ್ಲಿ ಕಚೇರಿಯಲ್ಲಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಡಿಸೆಂಬರ್ 6ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-237480.












Click it and Unblock the Notifications