ಎಂಆರ್ ಪಿಎಲ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 21 : ಸರ್ಕಾರಿ ಸ್ವಾಮ್ಯದ ಕರ್ನಾಟಕದ ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ ಲಿಮಿಟೆಡ್ (ಎಂಆರ್ ಪಿಎಲ್)ನಲ್ಲಿ ಖಾಲಿ ಇರುವ 74 ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಅಕ್ಟೋಬರ್ 19, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ
ವಿದ್ಯಾರ್ಹತೆ: ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications