ಎಂ ಆರ್ ಪಿಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಬೆಂಗಳೂರು, ಸೆಪ್ಟೆಂಬರ್ 07: ಸರ್ಕಾರಿ ಸ್ವಾಮ್ಯದ ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ ಲಿಮಿಟೆಡ್ (ಎಂಆರ್ ಪಿಎಲ್)ನಲ್ಲಿ ಖಾಲಿ ಇರುವ ಒಟ್ಟು 189 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
85 ಪದವಿ ಅಪ್ರೆಂಟಿಸ್ ಟ್ರೈನಿ ಹಾಗೂ 104 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 7 ಅಕ್ಟೋಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

1. 85 ಪದವಿ ಅಪ್ರೆಂಟಿಸ್ ಟ್ರೈನಿ ಹುದ್ದೆ
* ವಿದ್ಯಾರ್ಹತೆ: ಪದವಿ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
* ವೇತನ ಶ್ರೇಣಿ: 10000 ರು. ತಿಂಗಳಿಗೆ.
2. 104 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ
* ವಿದ್ಯಾರ್ಹತೆ: ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಡಿಪ್ಲಮೋನಲ್ಲಿ ಇಂಜಿನಿಯರಿಂಗ್ ತೇರ್ಗಡೆಯಾರಬೇಕು.
* ವೇತನ ಶ್ರೇಣಿ: 7000 ರು. ತಿಂಗಳಿಗೆ.
*ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಮೇಲೆ ತಿಳಿಸಲಾದ ಎರಡು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications