ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 23; ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ. ಚಿತ್ರದುರ್ಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 6/12/2021 ಕೊನೆಯ ದಿನವಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ (ಫೀಲ್ಡ್ ಆಪರೇಶನ್ಸ್‌) 1, ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್) 1, ಫೀಲ್ಡ್ ಮ್ಯಾನೇಜರ್ 1, ಅಕೌಂಟ್ಸ್ ಆಫೀಸರ್ 1, ಕಮರ್ಶಿಯಲ್ ಆಫೀಸರ್ 1, ಸೀಡ್ಸ್ ಆಫೀಸರ್ 1, ಎಕ್ಸಿಕ್ಯೂಟಿವ್ 1, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಕಮರ್ಶಿಯಲ್) 2, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ (ಸ್ಟೋರ್ಸ್) 1, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ (ಅಕೌಂಟ್ಸ್) 2, ಅಸಿಸ್ಟೆಂಟ್ 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

 Karnataka Oil Federation Recruitment Apply For Various Post

ಒಕ್ಕೂಟದಲ್ಲಿ ಖಾಲಿ ಇರುವ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಬಂಧ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿಸಿ ಪೂರ್ಣ ವಿವರದೊಂದಿಗೆ ಭರ್ತಿ ಮಾಡಿ ಸಲ್ಲಿಕೆ ಮಾಡುವುದು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ಅರ್ಜಿಯೊಂದಿಗೆ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳು ಎಲ್ಲಾ ಸೆಮಿಸ್ಟರ್ ಅಂಕಪಟ್ಟಿಗಳು, ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವ ಶಾಲೆಯ ವರ್ಗಾವಣೆ ಪತ್ರ ಅಥವ ಕ್ಯೂಮುಲೇಟಿವ್ ರೆಕಾರ್ಡ್ ಪ್ರಮಾಣ ಪತ್ರ ಸಲ್ಲಿಸಬೇಕು.

ಕಂಪ್ಯೂಟರ್‌ ಆಪರೇಷನ್ಸ್‌ ಮತ್ತು ಅಪ್ಲಿಕೇಶನ್ ನಿರ್ವಹಣೆಯಲ್ಲಿ ಸಂಬಂಧಪಟ್ಟ ಹುದ್ದೆಗಳಿಗೆ ನಿಗದಿಪಡಸಿದಂತೆ ಜ್ಞಾನ ಹೊಂದಿರುವ ಪ್ರಮಾಣ ಪತ್ರಗಳು ಹಾಗೂ ಟ್ಯಾಲಿ ಕೋರ್ಸ್ ತೇರ್ಗಡೆ ಹೊಂದಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು.

ಸೇವಾನುಭವ ಹೊಂದಿದ ಪ್ರಮಾಣ ಪತ್ರ. ಮೀಸಲಾತಿ ಜಾತಿ ಪ್ರಮಾಣ ಪತ್ರ, ಅಂಗವಿಕಲ ದೃಢಿಕರಣ ಪತ್ರ, ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆ ಮೂಲಕ ಇದರಲ್ಲಿ ನೀಡಿರುವ ನಮೂನೆಯಲ್ಲಿ ನಿರಾಪೇಕ್ಷಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ತನಗೆ ಸಂಬಂಧಿಕರಲ್ಲದ ಇಬ್ಬರು ಗೌರವಾನ್ವಿತ ವ್ಯಕ್ತಿಗಳಿಂದ ಪಡೆದ ನಡತೆ ಪ್ರಮಾಣ ಪತ್ರಗಳನ್ನು ಇದರಲ್ಲಿ ಒದಗಿಸಿದ ನಮೂನೆಯಲ್ಲಿ ಲಗತ್ತಿಸುವುದು. ಅರ್ಜಿಯೊಂದಿಗೆ ನಿಗದಿತ ಅರ್ಜಿ ಶುಲ್ಕದ ಡಿಡಿ/ ಪೇ ಆರ್ಡರ್ ಅನ್ನು ಸಹ ಲಗತ್ತಿಸಬೇಕು.

ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರವನ್ನು ಅರ್ಜಿಯ ಮೇಲ್ಭಾಗದ ನಿಗದಿತ ಸ್ಥಳದಲ್ಲಿ ಅಂಟಿಸಿ ಇನ್ನೆರಡು ಭಾವ ಚಿತ್ರಗಳನ್ನು ಅರ್ಜಿಯ ಮೇಲ್ಭಾಗದಲ್ಲಿ ಲಗತ್ತಿಸುವುದು. ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸಬೇಕು.

ಅರ್ಜಿಗಳನ್ನು ಆಫ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಲು ಅವಕಾಶವಿಲ್ಲ. ಎಲ್ಲಾ ದಾಖಲೆಗಳನ್ನು ಲಗತ್ತಿಸಿ 6/12/2021ರ ಸಂಜೆ 5.30ರ ಒಳಗಾಗಿ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು. ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ; ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಫ್ಲಾಟ್‌ ಸಂಖ್ಯೆ 74/ಎ ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ 577501.

ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಕ್ರಮ ಸಂಖ್ಯೆ 1 ರಿಂದ 10ರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ಸೂಚಿಸಿರುವ ಬಾಹ್ಯ ಮೂಲ ಸಂಸ್ಥೆಗಳಿಂದ ಕರ್ನಾಟಕ ಸಹಕಾರ ಸಂಘಗಳ ನಿಯಮ 1960 18 (ಸಿ)ರಂತೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಹ ಅಭ್ಯರ್ಥಿಗಳಿಗೆ ಒಟ್ಟು 200 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕ್ರಮ ಸಂಖ್ಯೆ 11ರ ಹುದ್ದೆಯ ಅರ್ಹ ಅಭ್ಯರ್ಥಿಗೆ ಕನ್ನಡ ಭಾಷೆ ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಒಟ್ಟು 100 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+