ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; 1137 ಹುದ್ದೆಗಳು
ಬೆಂಗಳೂರು, ಅಕ್ಟೋಬರ್ 13; ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 20/10/2022 ರಿಂದ 21/11/2022ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಆದರ (ತಿದ್ದುಪಡಿ) ನಿಯಮ2009. ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016, 2020 ಮತ್ತು 2021. ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೇ ಯಾವುದೇ ಆಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ನೇಮಕಾತಿ, ಕಾರ್ಲಟನ್ ಭವನ, ಆರಮನೆ ರಸ್ತೆ, ಬೆಂಗಳೂರು ಕಛೇರಿಗೆ ಸಲ್ಲಿಸತಕ್ಕದ್ದು.
ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 23/11/2022. ತಪ್ಪು ಮಾಹಿತಿ ನೀಡಿ ಅರ್ಜಿಗಳನ್ನು ಭರ್ತಿ ಮಾಡಿದರೆ ಅಭ್ಯರ್ಥಿಗಳ ವಿರುದ್ಧ ಕಾನೂನಿಯ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ವಯೋಮಿತಿಯ ವಿವರಗಳು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಟ 19 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
ಬುಡಕಟ್ಟು ಜನಾಂಗ ಎಂದರೆ ಉತ್ತರ ಕನ್ನಡ ಕಾರವಾರ, ದಕ್ಷಿಣ ಕನ್ನಡ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಅರಣ್ಯಗಳಲ್ಲಿ ಸಿದ್ದಿಗರು, ಜೇನುಕುರುಬ, ಕಾಡುಕುರುಬ, ಯರವ, ಸೋಲಿಗ, ಕುಡಿಯ, ಗೌಡ್ಲು, ಹಸಲರು, ಮಲೆಕುಡಿಯ ಮತ್ತು ಕೊರಗ ಬುಡಕಟ್ಟು ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳು.
ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿ; ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 21.11.2022 ಕ್ಕೆ ಅಭ್ಯರ್ಥಿಗೆ ಈ ಕೆಳಕಂಡ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 33 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 31 ವರ್ಷಗಳು.

ನೇಮಕಾತಿಗೆ ವಿದ್ಯಾರ್ಹತೆ ವಿವರ
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ 21.11.2022ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).
ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳು. ಸಿ. ಬಿ. ಎಸ್. ಇ ಮತ್ತು ಐ. ಎಸ್. ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ. ಎನ್. ಐ. ಓ. ಎಸ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ. ಎರಡು ವರ್ಷಗಳ ಐಟಿಐ ಕೋರ್ಸ್ ಅಭ್ಯರ್ಥಿಗಳು ಎನ್. ಐ. ಒ. ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ.

ಅಭ್ಯರ್ಥಿಗಳಿಗೆ ಅರ್ಹತೆ/ ಸೂಚನೆಗಳು
ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಪೊಲೀಸ್ ಕಾನ್ಸ್‌ಟೇಬಲ್ ವೃಂದದ ಸಿ. ಎ. ಆರ್. / ಡಿ. ಎ. ಆರ್ / ಕೆ. ಎಸ್. ಆರ್. ಪಿ/ ಕೆ. ಎಸ್. ಐ. ಎಸ್. ಎಫ್ ಹುದ್ದೆಯಲ್ಲಿ 5 ವರ್ಷಗಳ ಸೇವೆಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಪೂರೈಸಿರಬೇಕು ಹಾಗೂ ಪ್ರಸ್ತುತ ಮೇಲ್ಕಂಡ ಹುದ್ದೆಯ ಸೇವೆಯಲ್ಲಿರಬೇಕು. ಖಾಯಂ ಪೂರ್ವ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿರಬೇಕು ಮತ್ತು ಅರ್ಜಿ ಹಾಕುವ ಸಮಯದಲ್ಲಿ ಯಾವುದೇ ಇಲಾಖಾ ವಿಚಾರಣೆ/ ಚಾಲ್ತಿ ಶಿಕ್ಷೆ ಇರಬಾರದು.
ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು.
ಅಭ್ಯರ್ಥಿಯು ಅರ್ಜಿಯನ್ನು ಸಮರ್ಪಕವಾಗಿ ತುಂಬದೇ ಸದರಿ ಅರ್ಜಿ ತಿರಸ್ಕೃತವಾದಲ್ಲಿ ತತ್ಸಂಬಂಧ ಯಾವುದೇ ರೀತಿಯ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ. ಅರ್ಜಿ ತುಂಬುವ ವಿಧಾನ ಹಾಗೂ ಹೆಚ್ಚಿನ ವಿವರಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ನೀಡುವ ಮಾಹಿತಿಗಳು ಸರಿ ಇದೆ ಎಂದು ಭಾವಿಸಿ ಅವರುಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಅರ್ಹರೆ ಎಂಬುದನ್ನು ಪರಿಗಣಿಸಿ ಅರ್ಹರೆಂದು ಕಂಡುಬಂದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರಗಳನ್ನು ತಯಾರು (Upload) ಮಾಡಲಾಗುತ್ತದೆ.
ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಪೂರ್ಣ ಮಾಹಿತಿ ನೀಡದ ಅಥವಾ ತಪ್ಪು ಮಾಹಿತಿ ನೀಡಿದ, ಶುಲ್ಕ ಪಾವತಿಸದ, ಅಭ್ಯರ್ಥಿಯ ಸಹಿ ಇಲ್ಲದ ಮತ್ತು ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವೇತನ ಮತ್ತು ತರಬೇತಿ ಮಾಹಿತಿಗಳು
ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿರವರು ಕಾಲ ಕಾಲಕ್ಕೆ ನಿರ್ದಿಷ್ಟ ಪಡಿಸಿದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮೂಲ ತರಬೇತಿಯನ್ನು ಪಡೆಯಬೇಕು. ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾದ ಅಭ್ಯರ್ಥಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು.
ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.
ವೇತನ ಶ್ರೇಣಿ: 23500-550-24600-600-27000-650-29600-750-32600-850-36000-950-39800-1100-46400-125047650.
ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ಪ್ರತ್ಯೇಕವಾಗಿ ಅಂಚೆ ಮುಖಾಂತರ ನೀಡಲಾಗುವುದಿಲ್ಲ. ವೆಬ್‌ಸೈಟ್‌ನಲ್ಲಿಯೇ ಮಾಹಿತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಹುದ್ದೆಗಳ ವಿವರಗಳು; ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ) 683 ಹುದ್ದೆ. ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಮಹಿಳಾ) 229, ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ತೃತೀಯ ಲಿಂಗ) 22. ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 10. ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ) 134. ಸೇವಾ ನಿರತ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಮಹಿಳಾ) 57. ಸೇವಾನಿರತ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 1, ಸೇವಾ ನಿರತ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 1 ಒಟ್ಟು ಹುದ್ದೆಗಳು 1137.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://ksp.karnataka.gov.in/ or https://ksp-recruitment.in/ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅಭ್ಯರ್ಥಿಗಳಿಗೆ ಸಹಾಯವಾಣಿ ಸಂಖ್ಯೆಗಳು 080-22943346, 080-22943039












Click it and Unblock the Notifications