ಪೊಲೀಸ್ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಬೆಂಗಳೂರು, ಜೂನ್ 12 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಲಾಕ್ ಡೌನ್ ಹಿನ್ನಲೆಯಲ್ಲಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
Recommended Video
ಪೊಲೀಸ್ ಕಾನ್ಸ್‌ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕಗಳನ್ನು ವಿಸ್ತರಣೆ ಮಾಡಲಾಗಿದೆ. ವಯೋಮಿತಿ ಸೇರಿದಂತೆ ಬೇರೆ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಿ. ಪಿ. ಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ 558, ಎ. ಪಿ. ಸಿ. (ಪುರುಷ)(ಸಿಎಆರ್/ಡಿಎಆರ್) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ 444 ಇವುಗಳಿಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನಾಂಕವಾಗಿದ್ದು, ಶುಲ್ಕಗಳನ್ನು ಜುಲೈ 13ರ ತನಕ ಪಾವತಿಸಬಹುದು.

ಸಿ. ಪಿ. ಸಿ (ಪುರುಷ ಮತ್ತು ಮಹಿಳಾ) ಹುದ್ದೆಗಳ ಸಂಖ್ಯೆ 2007, ಎ. ಪಿ. ಸಿ. (ಪುರುಷ) (ಸಿಎಆರ್/ಡಿಎಆರ್), ಹುದ್ದೆಗಳ ಸಂಖ್ಯೆ 1005. ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನಾಂಕವಾಗಿದೆ. ಶುಲ್ಕಗಳನ್ನು ಜುಲೈ 15ರ ತನಕ ಪಾವತಿ ಮಾಡಬಹುದು.
ವಿಶೇಷ ಆರ್. ಪಿ. ಸಿ (ಪುರುಷ ಮತ್ತು ಮಹಿಳಾ) (ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ) 2420 ಹುದ್ದೆಗಳು ಹಾಗೂ ವಿಶೇಷ ಆರ್. ಪಿ. ಸಿ (ಪುರುಷ) (ಬ್ಯಾಂಡ್ಸ್‍ಮನ್) (ಕೆ.ಎಸ್.ಆರ್.ಪಿ ಮತ್ತು ಐ.ಆರ್.ಬಿ) ಹುದ್ದೆಗಳ ಸಂಖ್ಯೆ 252 ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನಾಂಕವಾಗಿದ್ದು, ಜುಲೈ 8ರ ತನಕ ಶುಲ್ಕ ಪಾವತಿಸಬಹುದು.












Click it and Unblock the Notifications