ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಲ್ಲ

|
Google Oneindia Kannada News

ಬೆಂಗಳೂರು, ಮೇ 17 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಮೇ 18ರಿಂದ ಜೂನ್ 16ರ ತನಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಮೂಂದೂಡಿ ಯಾವುದೇ ಆದೇಶ ಹೊರಡಿಸಿಲ್ಲ.

ಕರ್ನಾಟಕ ಪೊಲೀಸ್ ನೇಮಕಾತಿ; ಹುದ್ದೆಗಳ ವಿವರಗಳು ಕರ್ನಾಟಕ ಪೊಲೀಸ್ ನೇಮಕಾತಿ; ಹುದ್ದೆಗಳ ವಿವರಗಳು

ಕರ್ನಾಟಕದಲ್ಲಿ ಲಾಕ್ ಡೌನ್ ಸಂಪೂರ್ಣವಾಗಿ ಸಡಿಲಿಕೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಸೈಬರ್ ಸೆಂಟರ್, ಝೆರಾಕ್ಸ್ ಅಂಗಡಿಗಳನ್ನು ತೆರೆಯಲು ಅವಕಾಶ ಸಿಕ್ಕಿಲ್ಲ. ಆದ್ದರಿಂದ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕ ಮೂಂದೂಡಲಾಗಿದೆ ಎಂಬ ಸುದ್ದಿ ಹರಿಡಾಡುತ್ತಿತ್ತು.

KSCDRC ನೇಮಕಾತಿ: 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನKSCDRC ನೇಮಕಾತಿ: 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 Karnataka Police Constable Recruitment 2020 Application Date Not Postponed

ಅರ್ಜಿ ಸಲ್ಲಿಸಲು ಸಾಕಷ್ಟು ಕಾಲಾವಕಾಶ ಇರುವುದರಿಂದ ಈ ಮೊದಲು ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ 18-05-2020 ರಿಂದ 15-06-2020ರ ತನಕ ಹಾಗೂ ಸಿಪಿಸಿ/ಎಪಿಸಿ ಹುದ್ದೆಗಳಿಗೆ 20-05-2020 ರಿಂದ 22-06-220ರ ತನಕ ಅರ್ಜಿ ಸಲ್ಲಿಸಬಹುದು.

ಕೆ. ಎಸ್. ಆರ್‌. ಪಿ ಕಾನ್ಸ್‌ಟೇಬಲ್ ನೇಮಕಾತಿ; 2672 ಹುದ್ದೆಗಳು ಕೆ. ಎಸ್. ಆರ್‌. ಪಿ ಕಾನ್ಸ್‌ಟೇಬಲ್ ನೇಮಕಾತಿ; 2672 ಹುದ್ದೆಗಳು

ಪೊಲೀಸ್ ಇಲಾಖೆ ಕಾನ್ಸ್‌ಟೇಬಲ್ (ಸಿವಿಲ್) 558, ಸಶಸ್ತ್ರ ಕಾನ್ಸ್‌ಟೇಬಲ್ ಸಿಎಆರ್/ಡಿಎಆರ್ 444, ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) 2007 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದು.

English summary
Karnataka government not postponed the application submitting date for the police constable recruitment 2020. Candidates can apply from 18 May to 15 June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X