ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ ವಿವರಗಳು

ಬೆಂಗಳೂರು, ಜು.02 : ಕರ್ನಾಟಕ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ನಾಗರಿಕ) (ಪಿಎಸ್‌ಐ, ಸಿವಿಲ್) ಹುದ್ದೆಗಳ ನೇಮಕಾತಿ ಆದೇಶವನ್ನು ಪ್ರಕಟಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜುಲೈ 28, 2015.

ಒಟ್ಟು 46 ಹುದ್ದೆಗಳಿದ್ದು ಹೈದರಾಬಾದ್-ಕರ್ನಾಟಕ ಪದೇಶದ ಮೀಸಲಾತಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಬಳ್ಳಾರಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. [ನೇಮಕಾತಿ ಆದೇಶ, ಅರ್ಜಿ ಇಲ್ಲಿದೆ]

jobs

ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 28 ಮತ್ತು ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಜುಲೈ 29. [ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್ ಸಿ]

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 26 ವರ್ಷ. ಪ.ಜಾ/ಪ.ಪಂ/ಪ್ರವರ್ಗ -1/2ಎ/2ಬಿ/3ಎ/3ಬಿ ಗರಿಷ್ಠ ವಯೋಮಿತಿ 28 ವರ್ಷ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ನಲ್ಲಿ ಮಾತ್ರ ಪಾವತಿಸತಕ್ಕದ್ದು. ಸಾಮಾನ್ಯ ವರ್ಗ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 250 ರೂ.ಗಳು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 100 ರೂ.ಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+