ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಅಕ್ಟೋಬರ್ 09 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಕೊನೆಯ ದಿನಾಂಕ ನವೆಂಬರ್ 6, 2015.

ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳು (ಸಿವಿಲ್) ಪುರುಷ 155, ಮಹಿಳಾ 40, ಸೇವೆಯಲ್ಲಿರುವವರು 20 ಒಟ್ಟು 215.
ಹೈದರಾಬಾದ್-ಕರ್ನಾಟಕ ಮೀಸಲಿಗೊಳಪಡುವ ಬೆಂಗಳೂರು ನಗರದಲ್ಲಿನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ 9, ಮಹಿಳೆ 3, ಸೇವೆಯಲ್ಲಿರುವವರು 1 ಒಟ್ಟು 13. ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿನ ಹೈ-ಕ ಮೀಸಲಾತಿಗೊಳಪಡುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ 4, ಮಹಿಳಾ 1 ಒಟ್ಟು 5.

police

ವಯೋಮಿತಿ : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ) ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷ. ಪ.ಜಾ/ಪ.ಪಂ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷಗಳು. ಇತರೆ ವರ್ಗದವರಿಗೆ 26 ವರ್ಷಗಳು. [ಅರ್ಜಿ ಸಲ್ಲಿಸಲು ವಿಳಾಸ]

ಸೇವಾನಿರತ ಅಭ್ಯರ್ಥಿಗಳು ಪ.ಜಾ/ಪ.ಪಂ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು. ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದು ಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ ಅವರು ಸಲ್ಲಿಸಿದ ಸೇವಾ ಅವಧಿ ಜೊತೆಗೆ 3 ವರ್ಷಗಳ ರಿಯಾಯಿತಿ ಇದೆ. [ದಾವಣಗೆರೆ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ, ಪ್ರವರ್ಗ 2, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ.ಗಳು, ಪ.ಜಾ/ಪ.ಪಂ/ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅಥವ ಸ್ಟೇಟ್ ಬ್ಯಾಂಕ್ ಹೈದರಾಬಾದ್ ನಲ್ಲಿ ನ.7ರೊಳಗೆ ಪಾವತಿ ಮಾಡಬಹುದಾಗಿದೆ.

ಸೂಚನೆ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೈಹಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಮುಂಚಿತವಾಗಿ ಅಭ್ಯಾಸ ಮಾಡಿಕೊಂಡು ಪರೀಕ್ಷೆಗೆ ತಯಾರಾಗಲು ಸೂಚಿಸಲಾಗಿದೆ. ಈ ಪರೀಕ್ಷೆಗಳಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

ಇಂಗ್ಲಿಶ್‌ನಲ್ಲಿ ಓದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+