1588 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 18 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1588 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 30 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ ಎಲ್ಲೆಲ್ಲಿ?
* ಬೆಂಗಳೂರು ನಗರ-1363
* ಮೈಸೂರು ನಗರ-100.
* ಬೆಳಗಾವಿ ಜಿಲ್ಲೆ-50
*ಮೈಸೂರು ಜಿಲ್ಲೆ-75.
ವಯೋಮಿತಿ: 30/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 25, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 18ರಿಂದ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಹತೆ: ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಎಸ್ ಎಸ್ ಎಲ್ ಸಿ ಬೋರ್ಡ್ ನಿಂದ ಮಾನ್ಯತೆ ಪಡೆದಿರು ಶಾಲೆಗಳಲ್ಲಿ 10ನೇ ತರಗಳಿ(ಎಸ್ ಎಸ್ ಎಲ್ ಸಿ) ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications