ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಕರೆದ ಕರ್ನಾಟಕ ಪೊಲೀಸ್

By Gururaj
|
Google Oneindia Kannada News

ಬೆಂಗಳೂರು, ಜೂನ್ 05 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ವೈರ್‌ ಲೆಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜೂನ್ 15, 2018 ಕೊನೆಯ ದಿನವಾಗಿದೆ.

ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ವೈರ್‌ ಲೆಸ್) ಪುರುಷ 6, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ವೈರ್‌ ಲೆಸ್) ಮಹಿಳಾ 2 ಹುದ್ದೆಗಳಿವೆ.

ಪದವಿ ಪಡೆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆಪದವಿ ಪಡೆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್, ಕಂಪ್ಯೂಟರ್ ಸೈನ್ಸ್, ಟೆಲಿ ಕಮ್ಯೂನಿಕೇಷನ್ ವಿಷಯದಲ್ಲಿ ಪದವಿ ಪಡೆದಿರಬೇಕು.

Karnataka police recruitment 2018 : Apply for Sub Inspector post

ತತ್ಸಮಾನ ವಿದ್ಯಾರ್ಹತೆಯುಳ್ಳ ವಿಜ್ಞಾನ ವಿಷಯಗಳಲ್ಲಿನ ಅಂತಿಮ ಪರೀಕ್ಷೆಯಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಪಡೆದಿರಬೇಕು (ಎಸ್‌ಸಿ/ಎಸ್‌ಟಿ/ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಶೇ 45ರಷ್ಟು ಅಂಕಗಳು).

141 ಹುದ್ದೆ ಭರ್ತಿಗೆ ಅರ್ಜಿ ಕರೆದ ಇಂಜಿನಿಯರ್ಸ್‌ ಇಂಡಿಯಾ ಲಿ.141 ಹುದ್ದೆ ಭರ್ತಿಗೆ ಅರ್ಜಿ ಕರೆದ ಇಂಜಿನಿಯರ್ಸ್‌ ಇಂಡಿಯಾ ಲಿ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 15/6/2018ಕ್ಕೆ ಅನ್ವಯವಾಗುವಂತೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷಗಳು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ಪ್ರವರ್ಗ 2(ಎ)/2(ಬಿ)/3(ಎ)/3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ.

ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವ ಸ್ಥಳೀಯ ಅಂಚೆ ಕಚೇರಿಯ ಅಧಿಕೃತ ಶಾಖೆಗಳಲ್ಲಿ ಕಚೇರಿಯ ವೇಳೆಯಲ್ಲಿ ಚಲನ್ ನೀಡಿ ಪಾವತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ವಿಳಾಸ : www.ksp.gov.in

English summary
Karnataka State Police issued notification for recruitment of Sub Inspector Post (wireless). Candidate who is looking for job can apply online application before 15th June 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X