• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಪೊಲೀಸ್ ನೇಮಕಾತಿ : ಪದವೀಧರರು ಅರ್ಜಿ ಹಾಕಿ

|

ಬೆಂಗಳೂರು, ಆಗಸ್ಟ್ 08 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/8/2019 ಕೊನೆಯ ದಿನವಾಗಿದೆ.

ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್ಆರ್‌ಪಿ) (ಪುರುಷ ಮತ್ತು ಸೇವಾನಿರತ) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಂಚೆ ಇಲಾಖೆ ನೇಮಕಾತಿ; ವಿದ್ಯಾರ್ಹತೆ 10ನೇ ತರಗತಿ

ಒಟ್ಟು 40 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 28/8/2019ರ ಸಂಜೆ 6 ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಬ್ಯಾಂಕ್ ಅಥವ ಅಂಚೆ ಕಚೇರಿಯಲ್ಲಿ ಪಾವತಿ ಮಾಡಲು 30/8/2019 ಕೊನೆಯ ದಿನವಾಗಿದೆ.

ಐಟಿಐ ಲಿಮೆಟೆಡ್ ಸಂಸ್ಥೆಯಲ್ಲಿ 18 ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿವೆ

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅಧಿಸೂಚನೆ, ಸೂಚನೆ, ಎಫ್‌ಎಕ್ಯೂಗಳನ್ನು ಜಾಗರೂಕತೆಯಿಂದ ಓದಿಕೊಳ್ಳಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿವರ

ಒಟ್ಟು 40 ಹುದ್ದೆಗಳು

ಒಟ್ಟು 40 ಹುದ್ದೆಗಳು

ವಿಶೇಷ ಮೀಸಲು ಸಬ್-ಇನ್ಸ್‌ಪೆಕ್ಟರ್ (ಕೆಎಸ್ಆರ್‌ಪಿ) (ಪುರುಷ) 36 ಹುದ್ದೆ. ವಿಶೇಷ ಮೀಸಲು ಸಬ್-ಇನ್ಸ್‌ಪೆಕ್ಟರ್ (ಕೆಎಸ್ಆರ್‌ಪಿ) (ಪುರುಷ) ಸೇವೆಯಲ್ಲಿರುವವರು 04.

ವಿದ್ಯಾರ್ಹತೆ ವಿವರ

ವಿದ್ಯಾರ್ಹತೆ ವಿವರ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯೋಮಿತಿ ಮೀರರಬಾರದು.

ವಿಶೇಷ ಮೀಸಲು ಸಬ್-ಇನ್ಸ್‌ಪೆಕ್ಟರ್ (ಕೆಎಸ್ಆರ್‌ಪಿ) (ಪುರುಷ) 26 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷಗಳು.

ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್ಆರ್‌ಪಿ) (ಪುರುಷ) ಸೇವೆಯಲ್ಲಿರುವವರು 35 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕಗಳು

ಅರ್ಜಿ ಶುಲ್ಕಗಳು

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 250ಗಳು., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ.

English summary
Karnataka State Police invited applications for the post of Special Reserve Police sub-inspector (KSRP) (Men). Candidates can apply online before 28/8/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X