ಕರ್ನಾಟಕ ಪೊಲೀಸ್ ನೇಮಕಾತಿ; 556 ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಮೇ 07 : ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ರಾಜ್ಯ ಪೊಲೀಸ್ ಇಲಾಖೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. 556 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಸರ್ಕಾರ ಜಾಹೀರಾತು ಪ್ರಕಟಿಸಿದೆ. 556 ಹುದ್ದೆಗಳಲ್ಲಿ 125 ಹುದ್ದೆಗಳು ಹೈದರಾಬಾದ್-ಕರ್ನಾಟಕ ಭಾಗಕ್ಕೆ ಮೀಸಲಾಗಿವೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಆಸಕ್ತ ಅಭ್ಯರ್ಥಿಗಳು 1/6/2020 ರಿಂದ ಅರ್ಜಿಗಳನ್ನು ಸಲ್ಲಿಸಬೇಕಿದೆ.

police

ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡಲು 30/06/2020ರ ತನಕ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ನವ ಶಕ್ತಿಯೊಂದಿಗೆ ಪುನಶ್ಚೇತನಗೊಳಿಸುತ್ತಿದ್ದೇವೆ. ಧೈರ್ಯ, ಸ್ಥೈರ್ಯ ನಿಮ್ಮಲ್ಲಿದ್ದರೆ ಸುಸ್ವಾಗತ ಎಂದು ಜಾಹೀರಾತು ನೀಡಲಾಗಿದೆ.

ವಿವಿಧ ಹುದ್ದೆಗಳ ನೇಮಕಾತಿ : ಕರ್ನಾಟಕ ಸರ್ಕಾರ ಎರಡು ದಿನಗಳ ಹಿಂದೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4014 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿತ್ತು. ಪೊಲೀಸ್ ಕಾನ್ ಸ್ಟೇಬಲ್(ನಾಗರಿಕ) ಪುರುಷ ಮತ್ತು ಮಹಿಳೆ 2565 ಹುದ್ದೆಗಳು, ಸಶಸ್ತ್ರ ಪೊಲೀಸ್ ಕಾನ್ಸ್‌ಸ್ಟೇಬಲ್ (ಸಿಎಆರ್/ಡಿಎಆರ್) ಪುರುಷ 1449 ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟವಾಗಿತ್ತು.

ಅರ್ಜಿಗಳನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+