Karnataka Police Recruitment: 4,115 ಪೊಲೀಸ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್-ವಿವರ ಇಲ್ಲಿದೆ
Karnataka Police Recruitment 2024: ರಾಜ್ಯ ಸರ್ಕಾರ ಪೊಲೀಸ್ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ 4,115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾದರೆ ಇಲಾಖೆಯಲ್ಲಿ ಯಾವ್ಯಾವ ವಿಭಾಗಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಸರ್ಕಾರ ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ವಿಭಾಗವಾರು ಹುದ್ದೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

3,500 ಕಾನ್ಸ್‌ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. 3 ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆ ಆಗುವ ಸಾಧ್ಯತೆ ಇದೆ. ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು ಎಂದು ತಿಳಿಸಿದೆ.
ಇನ್ನಿ 2023-24 ಹಾಗೂ 2022-23ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ, ಪ್ರಸ್ತಾವನೆ ಸಲ್ಲಿಸಲಾಗಿರುವ ಹುದ್ದೆಗಳು ಇವುಗಳಾಗಿವೆ ಎಂದು ತಿಳಿದುವಂದಿದೆ.












Click it and Unblock the Notifications