Recruitment: 3995 ಪೊಲೀಸ್ ಹುದ್ದೆಗಳ ಭರ್ತಿ ಆರಂಭ, ನೇಮಕಾತಿ ಬಗ್ಗೆ ಪ್ರಿಯಾಂಕ್ ಖರ್ಗೆ ಅಪ್ಡೇಟ್
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದ (596) ಮತ್ತು ಉಳಿದ ಮೂಲ ವೃಂದಗಳಿಗೆ ಒಟ್ಟು 3995 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳಾಗಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೊಲಿಸ್ ನೇಮಕಾತಿ ಕುರಿತು ಪ್ರತಿಕ್ರಿಯಿಸಿರು ಅವರು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ರೋಸ್ಟರ್ ಬಿಂದುಗಳ ಅನುಸಾರ ನೇಮಕಾತಿ
ಒಳಮೀಸಲಾತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಗ್ಯಾರಂಟಿ ಸರ್ಕಾರವು ಕೊಟ್ಟ ಮಾತಿನಂತೆ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ ಎಂದರು.
ರಾಜ್ಯದ ಯುವಜನರು ತಮ್ಮ ನಿರೀಕ್ಷೆ, ಅರ್ಹತೆಗಳಿಗೆ ಅನುಗುಣವಾದ ಉದ್ಯೋಗ ಪಡೆಯಬೇಕು, ನಿರುದ್ಯೋಗ ನಿವಾರಣೆಯಾಗಬೇಕು ಮತ್ತು ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಬೇಕು ಎನ್ನುವುದು ಸರ್ಕಾರದ ಆಶಯ. ಈ ನೇಮಕಾತಿಯು ಅಧಿಸೂಚನೆಯು ಯುವಜನರ ಭವಿಷ್ಯ ಹಾಗೂ ಉದ್ಯೋಗದ ಕುರಿತಾದ ಕಾಂಗ್ರೆಸ್ ಪಕ್ಷ ಹಾಗೂ ಗ್ಯಾರಂಟಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.
3995 ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ
ಕರ್ನಾಟಕ ಪೊಲೀಸ್ ಇಲಾಖೆಯು ತನ್ನಲ್ಲಿ ಖಾಲಿ ಇರುವ ಒಟ್ಟು 3995 ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ. ಈ ನೇಮಕಾತಿ ಪ್ರಕ್ರಿಯೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಮಿಕ್ಕುಳಿದ ವೃಂದ
ಒಟ್ಟು ಹುದ್ದೆಗಳು: 3395
ಮಾಸಿಕ ತಿಂಗಳಿಗೆ 37,500 ನಿಂದ 76,100 ರೂಪಾಯಿ.
ಶೈಕ್ಷಣಿಕ ಅರ್ಹತೆ ಏನಿದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಬಿಎಸ್‌ಇ/ ಐಸಿಎಸ್‌ಇ/ ಎನ್‌ಐಒಎಸ್/ ರಾಜ್ಯ ಮಂಡಳಿಯಿಂದ ಪಿಯುಸಿ ಇಲ್ಲವೇ 12ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣವಾಗಿರಬೇಕು. ಐಟಿಐ (2 ವರ್ಷ) ಅಥವಾ ಡಿಪ್ಲೊಮಾ ಅಭ್ಯರ್ಥಿಗಳು ಸಹ ಅಧಿಸೂಚನೆ ನೋಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ ವಿವರ
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಜಾತಿವಾರು ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 33 ವರ್ಷ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
* ಅರ್ಜಿ ಸಲ್ಲಿಕೆ ಆರಂಭ: ಜೂನ್ 8
* ಅರ್ಜಿ ಸಲ್ಲಿಕೆ ಕೊನೆ ದಿನ: ಜುಲೈ 3
* ಶುಲ್ಕ ಪಾವತಿಗೆ ಕೊನೆ ದಿನ: ಜುಲೈ 4













Click it and Unblock the Notifications