ರಾಜ್ಯದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಸಿಹಿಸುದ್ದಿ

Karnataka Police Recruitment 2026: ರಾಜ್ಯದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ಕುರಿತು ಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದ್ರೆ ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

'ರಾಜ್ಯದ ಯುವಜನರಿಗೆ ಉದ್ಯೋಗ ಭದ್ರತೆ ಒದಗಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಜೊತೆಗೆ ಒಂದು ಬಾರಿಗೆ ಅನ್ವಯ ಆಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ಮಾಡಲಾಗಿದೆ,' ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Karnataka Police Recruitment 2026 Civil Police Constable Posts Announced 5-Year Age Relaxation

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದೇನು?

ಅಲ್ಲದೆ ನೂತನ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕೂಡ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ,' ಎಂದು ತಿಳಿಸಿದ್ದಾರೆ.

'ಕಲ್ಯಾಣ ಕರ್ನಾಟಕ ವೃಂದ (596) ಮತ್ತು ಉಳಿದ ವೃಂದಗಳಿಗೆ ಒಟ್ಟು 3,995 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳಾಗಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಒಳಮೀಸಲಾತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಗ್ಯಾರಂಟಿ ಸರ್ಕಾರವು ಕೊಟ್ಟ ಮಾತಿನಂತೆ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನಿಸಿದ ರೋಸ್ಟರ್ ಬಿಂದುಗಳಿಗೆ ಅನುಸಾರ ನೇಮಕಾತಿ ನಡೆಸಲಾಗುತ್ತಿದೆ. ಇದರಿಂದ ಎಲ್ಲ ಸಮುದಾಯಗಳಿಗೆ ನ್ಯಾಯಯುತ ಅವಕಾಶ ದೊರಕಲಿದೆ,' ಎಂದು ತಿಳಿಸಿದ್ದಾರೆ.

'ರಾಜ್ಯದ ಯುವಜನರು ತಮ್ಮ ನಿರೀಕ್ಷೆ, ಅರ್ಹತೆಗಳಿಗೆ ಅನುಗುಣವಾದ ಉದ್ಯೋಗ ಪಡೆಯಬೇಕು, ನಿರುದ್ಯೋಗ ನಿವಾರಣೆ ಆಗಬೇಕು ಮತ್ತು ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಬೇಕು ಎನ್ನುವುದು ಸರ್ಕಾರದ ಆಶಯ. ಈ ನೇಮಕಾತಿಯ ಅಧಿಸೂಚನೆಯು ಯುವಜನರ ಭವಿಷ್ಯ ಹಾಗೂ ಉದ್ಯೋಗದ ಕುರಿತಾದ ಕಾಂಗ್ರೆಸ್ ಪಕ್ಷ ಹಾಗೂ ಗ್ಯಾರಂಟಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ,' ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವವರ ಗಮನಕ್ಕೆ

* ಒಟ್ಟು ಹುದ್ದೆಗಳ ಸಂಖ್ಯೆ: 3,395

* ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್

* ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಮುಗಿಸಿರಬೇಕು.

ಕೋವಿಡ್ ಹಾಗೂ ಇತರ ಕಾರಣಗಳಿಂದಾಗಿ ಕಳೆದ ಕೆಲವು ವರ್ಷಗಳಿಂದ ನೇಮಕಾತಿ ವಿಳಂಬ ಆಗಿದ್ದರಿಂದ ಅಭ್ಯರ್ಥಿಗಳಿಗೆ ವಯೋಮಿತಿ ಮೀರಿ ಹೋಗಿತ್ತು. ಇದನ್ನು ಪರಿಗಣಿಸಿದ ಸರ್ಕಾರವು ಒಂದು ಬಾರಿ ಮಾತ್ರ ಅನ್ವಯ ಆಗುವಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಲಿಕೆ ನೀಡಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಅತ್ಯಂತ ದೊಡ್ಡ ಸಿಹಿ ಸುದ್ದಿಯಾಗಿದೆ.

'ಯುವಕರ ಕೈಗೆ ಉದ್ಯೋಗ, ಪ್ರಗತಿಯ ಹಾದಿಯಲ್ಲಿ ನಮ್ಮ ರಾಜ್ಯ' ಎಂಬ ಘೋಷಣೆಯೊಂದಿಗೆ ಈ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಒಟ್ಟಿನಲ್ಲಿ ಈ ಸುದ್ದಿಯು ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಂತಸ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+