ಕರ್ನಾಟಕ ಪೊಲೀಸ್ ನೇಮಕಾತಿ; 300 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು
ಬೆಂಗಳೂರು, ಅಕ್ಟೋಬರ್ 16 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 6/11/2019 ಕೊನೆಯ ದಿನವಾಗಿದೆ.
ಒಟ್ಟು 300 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದವರು ಶುಲ್ಕಗಳನ್ನು ಪಾವತಿ ಮಾಡಲು 8/11/2019 ಕೊನೆ ದಿನ.
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನ ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅಧಿಸೂಚನೆ, ಅರ್ಜಿ ಭರ್ತಿ ಮಾಡಲು ಸೂಚನೆ, ಎಫ್. ಎ. ಕ್ಯೂಗಳನ್ನು ಓದಿಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರಗಳು
* ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ 205
* ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 63
* ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರು 32

ವಿದ್ಯಾರ್ಹತೆಯ ವಿವರಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.

ವಯೋಮಿತಿ ವಿವರಗಳು
ಅರ್ಜಿ ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಕೆಳಕಂಡ ವಯೋಮಿತಿ ಮೀರಿರಬಾರದು.
* ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 28 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ 30 ವರ್ಷಗಳು.
* ಸೇವಾ ನಿರತರಿಗೆ 35 ವರ್ಷಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ 40 ವರ್ಷಗಳು.

ಶುಲ್ಕ, ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸುವ ಸಾಮಾನ್ಯ, ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗೆ 250 ರೂ.ಗಳು., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ರ ಅಭ್ಯರ್ಥಿಗೆ 100 ರೂ.ಗಳು.
ಅಧಿಕೃತ ಬ್ಯಾಂಕ್ ಶಾಖೆ/ಅಂಚೆ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು 8/11/2019 ಕೊನೆಯ ದಿನವಾಗಿದೆ.












Click it and Unblock the Notifications