ಕರ್ನಾಟಕ ಪೊಲೀಸ್ ನೇಮಕಾತಿ; 3026 ಕಾನ್ಸ್‌ಟೇಬಲ್ ಹುದ್ದೆ

ಬೆಂಗಳೂರು, ಸೆಪ್ಟೆಂಬರ್ 23 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 17/10/2019 ಕೊನೆಯ ದಿನವಾಗಿದೆ.

3026 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಭರ್ತಿ ಮಾಡಲು ಅವಕಾಶವಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 17ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳ ವರ್ಗೀಕರಣ, ಅರ್ಹತಾ ಷರತ್ತು ಮುಂತಾದ ವಿವರಗಳನ್ನು www.ksp.gov.in ನಲ್ಲಿ ನೀಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಧಿಸೂಚನೆ, ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಒಟ್ಟು ಹುದ್ದೆಗಳ ವಿವರ

ಒಟ್ಟು ಹುದ್ದೆಗಳ ವಿವರ

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಪುರುಷ 1013 ಹುದ್ದೆಗಳು, ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಪುರುಷ ಮತ್ತು ಮಹಿಳಾ 2013 ಹುದ್ದೆಗಳನ್ನು ಸೇರಿ ಒಟ್ಟು 3026 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯ ವಿವರಗಳು

ವಿದ್ಯಾರ್ಹತೆಯ ವಿವರಗಳು

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು.

ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಅರ್ಜಿ ಸಲ್ಲಿಸುವವರು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಕನಿಷ್ಠ ವಯೋಮಿತಿ 18 ವರ್ಷ. ಇತರೆ ಅಭ್ಯರ್ಥಿಗಳಿಗೆ 25 ವರ್ಷ. ಪ.ಜಾ/ಪ.ಪಂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ, ಬುಡಕಟ್ಟು ಜನಾಂಗ ಅಭ್ಯರ್ಥಿಗಳಿಗೆ 30 ವರ್ಷ.

ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) 19 ವರ್ಷ ಕನಿಷ್ಠ ವಯೋಮಿತಿ. ಇತರೆ ಅಭ್ಯರ್ಥಿಗಳಿಗೆ 25 ವರ್ಷ. ಪ.ಜಾ/ಪ.ಪಂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ, ಬುಡಕಟ್ಟು ಜನಾಂಗ ಅಭ್ಯರ್ಥಿಗಳಿಗೆ 30 ವರ್ಷ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+