246 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ
ಬೆಂಗಳೂರು, ಆಗಸ್ಟ್ 3 : ಹೈದರಾಬಾದ್-ಕರ್ನಾಟಕ ಪ್ರದೇಶದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. 246 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನವಾಗಿದೆ.
ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಆರೋಗ್ಯ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. [ನೇಮಕಾತಿ ಆದೇಶ ನೋಡಿ]

ವಿದ್ಯಾರ್ಹತೆ ವಿವರ : ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮ 2009ರ ಪ್ರಕಾರ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೈದರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಯಾಗಿರಬೇಕು. [ಅರ್ಜಿ ಸಲ್ಲಿಸಲು ವಿಳಾಸ]
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 25 ವರ್ಷ. ಎಸ್‌ಸಿ/ಎಸ್‌ಟಿ/ಪ್ರವರ್ಗ -1/2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 27 ವರ್ಷಗಳು.
ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ.,ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು/ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ಗಳಲ್ಲಿ ಮಾತ್ರ ಪಾವತಿ ಮಾಡಬಹುದಾಗಿದೆ.
ಪ್ರಮುಖ ದಿನಾಂಕಗಳು
* ಜುಲೈ 27ರ ಬೆಳಗ್ಗೆ 10 ಗಂಟೆಯಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ
* ಆಗಸ್ಟ್ 28ರ ಸಂಜೆ 6 ಗಂಟೆ ಅರ್ಜಿ ಸಲ್ಲಿಸಲು ಕೊನೆಯ ದಿನ
* ಅರ್ಜಿ ಶುಲ್ಕ ಪಾವತಿ ಮಾಡಲು ಆಗಸ್ಟ್ 26 ಕೊನೆಯ ದಿನ












Click it and Unblock the Notifications