530 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 05 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ (ಸ್ಥಳೀಯ/ಸ್ಥಳಿಯೇತರ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ) ಪುರುಷ ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್‌ಟೇಬಲ್ ಪುರುಷ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

(ಸ್ಥಳೀಯ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ) (ಪುರುಷ) 4 ಹುದ್ದೆಗಳು, (ಸ್ಥಳೀಯೆತರ) ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ) (ಪುರುಷ) 337 ಹುದ್ದೆಗಳು. ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) 189 ಒಟ್ಟು 530 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.[ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ]

Karnataka police recruitment notification August 2016

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/8/2016 ಸಂಜೆ 6 ಗಂಟೆ. ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 2/9/2016.[ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷದ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.[ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ]

jobs

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ -1 ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು. [ಅರ್ಜಿ ಸಲ್ಲಿಸಲು ವಿಳಾಸ]

ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್‌ ಮೈಸೂರು/ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಅಧಿಕೃತ ಶಾಖೆಗಳಲ್ಲಿ ಪಾವತಿ ಮಾಡಬೇಕು. ಆನ್‌ಲೈನ್‌ನಲ್ಲಿ ಶುಲ್ಕ ಪಾವತಿ ಮಾಡುವಾಗ ಗೊಂದಲಗಳು ಉಂಟಾದರೆ 080-22943346 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+