ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Police: ಪೊಲೀಸ್ ಆಯ್ಕೆ ಪ್ರಕ್ರಿಯೆ ಅತ್ಯಂತ ಪಾರದರ್ಶಕ: ಗೃಹ ಸಚಿವ ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು ಸೆಪ್ಟಂಬರ್ 13: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,484 ಸಶಸ್ತ್ರ ಪಡೆಗಳ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಇದೇ ಮೊದಲ ಬಾರಿಗೆ ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಅವಕಾಶ ನೀಡುತ್ತಿರುವುದು ವಿಶೇಷವಾಗಿದೆ.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಎಲ್ಲ ಖಾಲಿ ಹುದ್ದೆಗಳಿಗೆ ಅತ್ಯಂತ ಪಾರದರ್ಶಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳಿಗೆ ಅಕ್ಟೋಬರ್ 31ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

KSP Recruitment 2022: 3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆKSP Recruitment 2022: 3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆ

ಹುದ್ದೆಗಳ ನೇಮಕಾತಿ ಸಂಬಂಧ ಪ್ರಕಟಣೆ ಹೊರಡಿಸಿರುವ ರಾಜ್ಯ ಪೊಲೀಸ್ ಇಲಾಖೆಯು, ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿಯಡಿ ಒಟ್ಟು 420 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಇದರಲ್ಲಿ 11 ಸ್ಥಾನಗಳು ಪುರುಷ ತೃತೀಯ ಲಿಂಗಿ ಗಳಿಗೆ ಮೀಸಲಿಡಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಒಳಗೊಂಡಂತೆ 3,064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ.

Karnataka Police recruitment process will be transparent: Araga Jnanendra

ಆನ್‌ಲೈನ್‌ನಲ್ಲಿ ಮಾತ್ರವೇ ಅರ್ಜಿ ಸಲ್ಲಿಸಿ

ಸದ್ಯಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳಲ್ಲಿ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಲ್ಲಿ ಸುಮಾರು 16,000 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕಿದೆ. ಅತ್ಯಂತ ಪಾರದರ್ಶಕವಾಗಿ ನಡೆಯಲಿರುವ ನೇಮಕಾತಿ ಪ್ರಕ್ರಿಯೆ ಸಂದರ್ಭದಲ್ಲಿ ಅಭ್ಯರ್ಥಿಗಳು, ಯಾವುದೇ ಅಕ್ರಮ ಅಥವಾ ವಾಮಮಾರ್ಗದ ಮೂಲಕ ಹುದ್ದೆಗಳನ್ನು ಪಡೆಯಲು ಯತ್ನಿಸಿದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.

Karnataka Police recruitment process will be transparent: Araga Jnanendra

ಅಭ್ಯರ್ಥಿಗಳು ಪೊಲೀಸ್ ಇಲಾಖೆ ಅಧಿಕೃತ ವೆಬ್‌ಸೈಟ್ https://ksp.karnataka.gov.in ಅಥವಾ https://ksp-recruitment.in ಮೂಲಕ ಅಕ್ಟೋಬರ್ 31ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅಂಚೆ ಮೂಲಕ ಸಲ್ಲಿಸಲಾಗುವ ಯಾವುದೇ ಅರ್ಜಿ ಸ್ವೀಕರಿಸುವುದಿಲ್ಲ ಎಂದು ತಿಳಿಸಿರುವ ಪೊಲೀಸ್ ಇಲಾಖೆ ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆ ವಿವಿರ, ಶುಲ್ಕಕ್ಕಾಗಿ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ತಿಳಿಸಿದೆ.

English summary
Karnataka Police recruitment. Notification for 3,484 armed police constable posts recruitment in Karnataka Police department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X