ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ : 203 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 15 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 203 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ನೇರ ನೇಮಕಾತಿಯನ್ನು ಮಾಡಲಾಗುತ್ತಿದೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ.

15/7/2019 ರಿಂದ 5/8/2019ರ ಸಂಜೆ 6 ಗಂಟೆಯ ತನಕ ಅರ್ಜಿಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಅಧಿಕೃತ ಬ್ಯಾಂಕ್ ಖಾತೆ ಅಥವ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು 7/8/2019 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡುವ ಮೊದಲು www.ksp.gov.in ನಲ್ಲಿ ನೀಡಲಾಗಿರುವ ಅಧಿಸೂಚನೆ, ಸೂಚನೆ, ಎಫ್‌ಎಕ್ಯೂಗಳನ್ನು ಜಾಗರೂಕತೆಯಿಂದ ಓದಿಕೊಳ್ಳಬೇಕು ಎಂದು ಪ್ರಟಕಣೆಯಲ್ಲಿ ಮನವಿ ಮಾಡಲಾಗಿದೆ....

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

203 ಹುದ್ದೆಗಳ ನೇಮಕಾತಿ

203 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಹಾಗೂ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) (ಪುರುಷ & ಸೇವೆಯಲ್ಲಿರುವವರು) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ 138, ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 41, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರು 21, ಸಶಸ್ತ್ರ ಮೀಸಲು ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) ಪುರುಷ 37, ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) ಸೇವೆಯಲ್ಲಿರುವವರು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಈ ಕೆಳಕಂಡ ವಯಸ್ಸು ಮೀರಿರಬಾರದು.

* ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 28 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ.

* ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) 26 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ.

* ಸೇವಾನಿರತ ಅಭ್ಯರ್ಥಿಗಳಿಗೆ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ.

ವಿದ್ಯಾರ್ಹತೆ, ಅರ್ಜಿ ಶುಲ್ಕ

ವಿದ್ಯಾರ್ಹತೆ, ಅರ್ಜಿ ಶುಲ್ಕ

ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ. ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+