Karnataka Postal Circle Recruitment: ಪೋಸ್ಟ್‌ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್. 01: ಕರ್ನಾಟಕ ಪೋಸ್ಟಲ್ ಸರ್ಕಲ್ ಮಾರ್ಚ್ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಪೋಸ್ಟ್‌ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳನ್ನು ಬಯಸುವ ಮತ್ತು ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 03 ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪೋಸ್ಟಲ್ ಸರ್ಕಲ್ ಹುದ್ದೆಯ ಅಧಿಸೂಚನೆ
ಸಂಸ್ಥೆ ಹೆಸರು: ಕರ್ನಾಟಕ ಪೋಸ್ಟಲ್ ಸರ್ಕಲ್
ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆ ಹೆಸರು: ಪೋಸ್ಟ್‌ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್
ವೇತನ: ಕರ್ನಾಟಕ ಪೋಸ್ಟಲ್ ಸರ್ಕಲ್ ನಿಯಮಗಳ ಪ್ರಕಾರ ನೀಡಲಾಗುತ್ತದೆ.
ಹುದ್ದೆಯ ವಿವರಗಳು
ಅಂಚೆ ಸಹಾಯಕ - 6
ವಿಂಗಡಣೆ ಸಹಾಯಕ - 3
ಪೋಸ್ಟ್‌ಮ್ಯಾನ್ - 13
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿಗೆ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ವಯೋಮಿತಿ ಸಡಿಲಿಕೆ ಕರ್ನಾಟಕ ಪೋಸ್ಟಲ್ ಸರ್ಕಲ್ ನಿಯಮಗಳ ಪ್ರಕಾರ ಇರಲಿದೆ. ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಪೋಸ್ಟ್‌ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು (R&E), ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಕರ್ನಾಟಕ ವೃತ್ತ, ಬೆಂಗಳೂರು-560001 ಇವರಿಗೆ ಏಪ್ರಿಲ್ 03, 2024 ರ ಒಳಗಾಗಿ ಕಳುಹಿಸಬೇಕು.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕ್ಕೆ ಪ್ರಾರಂಭ ದಿನಾಂಕ: 28-02-2024
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-Apr-2024
ಪೋಸ್ಟ್‌ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಕ್ರಮ

ಮೊದಲನೆಯದಾಗಿ ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆಯನ್ನು ಅಧಿಕೃತ indiapost.gov.in ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಪರಿಶೀಲಿಸಬೇಕು. ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಇರಬೇಕು. ಐಡಿಗಳು, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್ ಸೇರಿ ಅವಶ್ಯಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಕೊನೆಯದಾಗಿ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು (R&E), ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಕರ್ನಾಟಕ ವೃತ್ತ, ಬೆಂಗಳೂರು-560001 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) ಈ ವಿಳಾಸಕ್ಕೆ ಕಳುಹಿಸಿ.












Click it and Unblock the Notifications