ಕರ್ನಾಟಕ ಅಂಚೆ ವೃತ್ತ ನೇಮಕಾತಿ; 52 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 23 : ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಪೋಸ್ಟಲ್ ಅಸಿಸ್ಟೆಂಟ್, ಸ್ಟೋರಿಂಗ್ ಅಸಿಸ್ಟೆಂಟ್ ಒಟ್ಟು 52 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಬೋರ್ಡ್‌ನಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 20 ರಿಂದ 25 ಸಾವಿರ ರೂ. ತನಕ ವೇತನ ನಿಗದಿಗೊಳಿಸಲಾಗಿದೆ.

Karnataka Postal Circle Recruitment Apply For 52 Post

ಅರ್ಜಿ ಹಾಕುವ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 20 ಡಿಸೆಂಬರ್ 2020ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ವಿಳಾಸ [email protected] / [email protected]

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್‌ಗೆ ಭೇಟಿ ನೀಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+