ಕರ್ನಾಟಕ ಅಂಚೆ ವೃತ್ತ ನೇಮಕಾತಿ; 52 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 23 : ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಪೋಸ್ಟಲ್ ಅಸಿಸ್ಟೆಂಟ್, ಸ್ಟೋರಿಂಗ್ ಅಸಿಸ್ಟೆಂಟ್ ಒಟ್ಟು 52 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ನೇಮಕಾತಿ ಸ್ಥಗಿತ; ಹಲವರ ಕೈ ತಪ್ಪಲಿದೆ ಸರ್ಕಾರಿ ಉದ್ಯೋಗ!
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಬೋರ್ಡ್‌ನಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 20 ರಿಂದ 25 ಸಾವಿರ ರೂ. ತನಕ ವೇತನ ನಿಗದಿಗೊಳಿಸಲಾಗಿದೆ.
ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಹಾಕುವ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 20 ಡಿಸೆಂಬರ್ 2020ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಬೀದರ್; ಆಶಾ ಮೆಂಟರ್ ಹುದ್ದೆಗಾಗಿ ಅರ್ಜಿ ಹಾಕಿ
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ವಿಳಾಸ cpmgre@gmail.com / rectt.ka@indiapost.gov.in
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್‌ಗೆ ಭೇಟಿ ನೀಡಿ