ಕರ್ನಾಟಕ: ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 15 : ಅಂಚೆ ಇಲಾಖೆ (ಕರ್ನಾಟಕ ವೃತ್ತ)ಯಲ್ಲಿ ಖಾಲಿ ಇರುವ 04 ಕುಶಲಕರ್ಮಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕುಶಲಕರ್ಮಿ ಹುದ್ದೆಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 14 ಅಕ್ಟೋಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: 1 ವರ್ಷದ ಅನುಭವದೊಂದಿಗೆ ಸರ್ಕಾರಿ ಅಥವಾ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಕುಶಲಕರ್ಮಿ ಪ್ರಮಾಣಪತ್ರವನ್ನು ಹೊಂದಿರಬೇಕು.
ವೇತನ ಶ್ರೇಣಿ: 5200 ರಿಂದ 20200 ರು. ತಿಂಗಳಿಗೆ.
ವಯೋಮಿತಿ: ಜುಲೈ 1, 2017ಕ್ಕೆ ಅನ್ವಯವಾಗುವಂತೆ 18 ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಹಾಗೂ ಕೊನೆಯದಾಗಿ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಕುಶಲಕರ್ಮಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications