ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ 1102 ಹುದ್ದೆಗಳ ನೇಮಕಾತಿ
ಬೆಂಗಳೂರು, ಡಿಸೆಂಬರ್ 22: ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
32 ಜೈಲರ್ ಮತ್ತು 1070 ವಾರ್ಡರ್ ಹುದ್ದೆಗಳ ನೇಮಕಾತಿಗೆ ಪುರುಷ ಮತ್ತು ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 09, 2018ರೊಳಗೆ ಅರ್ಜಿ ಸಲ್ಲಿಸಲು ಕೋರಾಗಿದೆ.

ಹುದ್ದೆಗಳ ವಿವರ
1. ಜೈಲರ್-32
* ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಒಂದು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸೋಶಿಯಾಲೊಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದವರಿಗೆ ಆದ್ಯತೆ ಇದೆ.
2. 1070 ವಾರ್ಡರ್ ಹುದ್ದೆ
* ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ (ಹತ್ತನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
* ವಯೋಮಿತಿ: ಕನಿಷ್ಠ -20 ವರ್ಷ, ಗರಿಷ್ಠ-26 ವರ್ಷ (ಪ.ಜಾ/ಪ.ಪಂ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ) ಇದು ವಾರ್ಡರ್ ಮತ್ತು ಜೈಲರ್ ಎರಡೂ ಹುದ್ದೆಗಳಿಗೆ ಅನ್ವಯವಾಗುತ್ತದೆ.
* ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 250 ರು. ಪ.ಜಾ/ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರು.ಎರಡು ಹುದ್ದೆಗಳಿಗೆ ನಿಗದಿ ಪಡಿಸಲಾಗಿದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2018
*ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-01-2018
*ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22262263 ಕರೆ ಮಾಡಿ.
ಇನ್ನಷ್ಟು ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications