ಕೆಪಿಎಸ್ಸಿ: ಟೈಪಿಸ್ಟ್ ಹಾಗೂ ಸ್ಟೆನೋ ಹುದ್ದೆಗಳಿಗೆ ಅರ್ಜಿ ಹಾಕಿ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 23: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ವಿವಿಧ ಇಲಾಖೆಗಳಲ್ಲಿರುವ ಟೈಪಿಸ್ಟ್ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 526 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಡಿಸೆಂಬರ್ 15, 2016.

ಶೀಘ್ರಲಿಪಿಗಾರರ ಮತ್ತು ಬೆರಳಚ್ಚುಗಾರರನೇಮಕಾತಿ ನಿಯಮಗಳು 1983 ಮತ್ತು 2015ರ ತಿದ್ದುಪಡಿಗಳನ್ವಯ ಈ ಕೆಳಕಂಡ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಶೀಘ್ರಲಿಪಿಗಾರರ ಮತ್ತು ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಿದೆ.

Karnataka PSC recruitment 2016-17 notification: Typist and Stenographer

ಹುದ್ದೆಗಳು: ಟೈಪಿಸ್ಟ್ ಹಾಗೂ ಸ್ಟೆನೋಗ್ರಾಫರ್
ಒಟ್ಟು ಹುದ್ದೆಗಳು : 526
ವಿದ್ಯಾರ್ಹತೆ: ಪಿಯುಸಿ/ 3 ವರ್ಷಗಳ ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ/ ಟೈಪಿಂಗ್ ಟೆಸ್ಟ್ ಪಾಸಾಗಿರಬೇಕು.
ವಯೋಮಿತಿ: 18ರಿಂದ 40 ವರ್ಷದ ತನಕ
* ಆಯ್ಕೆ ಯಾದವರಿಗೆ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನವಿರುತ್ತದೆ.

ಅರ್ಜಿ ಶುಲ್ಕ:

* ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 300 ರು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 25ರು

ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ ಮಾತ್ರ ಬಳಸಿ, ಅರ್ಜಿ ಸಲ್ಲಿಸುವ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಮತ್ತು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉದ್ಯೋಗ ಕುರಿತಾದ ಜಾಹೀರಾತು ಪ್ರಕಟಣೆ ಇಲ್ಲಿದೆ ಡೌನ್ ಲೋಡ್ ಮಾಡಿಕೊಳ್ಳಿ

(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka PSC recruitment 2016-17 notification Typist and Stenographer 526 posts :- Interested candidates can apply online before 15th December 2016
Please Wait while comments are loading...