RDWSD ಇಲಾಖೆ ನೇಮಕಾತಿ; ವಿವರಗಳು, ಎಷ್ಟು ಹುದ್ದೆ?
ಬೆಂಗಳೂರು, ಡಿಸೆಂಬರ್ 20; ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮಾಹಿತಿ ನೀಡಿದೆ.
ಕೆಪಿಎಸ್‌ಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD) ತಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಒಟ್ಟು 25 ಹುದ್ದೆಗಳು. ಸಹಾಯಕ ಇಂಜಿನಿಯರ್ (ಗ್ರೇಡ್-1), ಒಟ್ಟು 288 ಹುದ್ದೆಗಳು. ಕಿರಿಯ ಇಂಜಿನಿಯರ್, ಒಟ್ಟು 136 ಹುದ್ದೆಗಳು.

ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ವೃಂದದ ನೇರ ನೇಮಕಾತಿ ಕೋಟಾದಡಿ ಲಭ್ಯವಿರುವ ಒಟ್ಟು 170 ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಂಗಳೂರು ಇವರಿಗೆ ತಿಳಿಸಲಾಗಿದೆ.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ; ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ವಿಕಲ ಚೇತನರಿಗೆ ಮೀಸಲಾತಿಗಾಗಿ ರೋಷ್ಟರ್ ಬಿಂದುವನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ ನಂತರ ಆರ್ಥಿಕ ಇಲಾಖೆಯ ಸಹಮತಿ ಪಡೆದು ನೇಮಕಾತಿ ಪ್ರಸ್ತಾವನೆಯನ್ನು ಕೆಪಿಎಸ್‌ಸಿಗೆ ಸಲ್ಲಿಸಲಾಗುತ್ತದೆ.
ಇವುಗಳಲ್ಲಿ ಸಹಾಯಕ ಇಂಜಿನಿಯರ್ 38, ಕಿರಿಯ ಇಂಜಿನಿಯರ್ 230, ಪಥಮ ದರ್ಜೆ ಲೆಕ್ಕ ಸಹಾಯಕ 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕ 6, ಶೀಘ್ರಲಿಪಿಗಾರರು 7, ಬೆರಳಚ್ಚುಗಾರರು 40, ವಾಹನ ಚಾಲಕರು 31 ಮತ್ತು ಗ್ರೂಪ್ ಡಿ 76 ಹುದ್ದೆಗಳು ಸೇರಿವೆ. ಕಲ್ಯಾಣ ಕರ್ನಾಟಕ ವೃಂದದ 5 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಬಗ್ಗೆ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ; ಪ್ರಸ್ತುತ ಕಾರ್ಯನಿರ್ವಾಹಕ ಅಧಿಕಾರಿ/ ಸಹಾಯಕ ಕಾರ್ಯದರ್ಶಿ ವೃಂದದಲ್ಲಿ ನೇರ ನೇಮಕಾತಿ ಕೋಟಾದಡಿ 59 ಹುದ್ದೆಗಳು ಖಾಲಿ ಇದ್ದು, ಅವುಗಳ ಪೈಕಿ 2023-24ನೇ ಸಾಲಿನಲ್ಲಿ 20 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.
ಸದರಿ 20 ಹುದ್ದೆಗಳ ಪೈಕಿ ಮಿಕ್ಕುಳಿದ ಮೂಲ ವೃಂದದ 16 ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ 4 ಹುದ್ದೆಗಳನ್ನು ಕರ್ನಾಟಕ ಗೆಜೆಟೆಡ್ ಪ್ರೊಬೆಷನರುಗಳು ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ) ನಿಯಮಗಳು 1997ರಡಿಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಕಳುಹಿಸಲಾಗಿದೆ.
ಖಾಲಿ ಇರುವ ಗ್ರಾಮ ಪಂಚಾಯಿತಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಸಮೀಪದಲ್ಲಿರುವ ಗ್ರಾಮ ಪಂಚಾಯಿತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ/ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃಂದದ ನೌಕರರಿಗೆ ಅಧಿಕ ಪ್ರಭಾರವಹಿಸಲು ನಿರ್ದೇಶನ ನೀಡಲಾಗಿದೆ.
ನೇರ ನೇಮಕಾತಿ ಕೋಟಾದಡಿ ಖಾಲಿಯಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ 256 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃಂದದ 220 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ವೃಂದದ 343 ಹುದ್ದೆಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ 105 ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೇಡ್-1 ವೃಂದದ ಅರ್ಹ ನೌಕರರು ಲಭ್ಯವಾದಂತ ಜೇಷ್ಠತೆ ಮತ್ತು ಅರ್ಹತೆ ಆಧಾರದ ಮೇಲೆ ಮುಂಬಡ್ತಿ ನೀಡಲು ಕ್ರಮ ವಹಿಸಲಾಗುತ್ತಿದೆ.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ರವರು ನೇಮಕಾತಿ ಪ್ರಾಧಿಕಾರ ಆಗಿದ್ದು ಖಾಲಿ ಹುದ್ದೆಗೆ ಎದುರಾಗಿ ಮುಂಬಡ್ತಿ/ ಸೇವೆಯೊಳಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ/ ತಾಲ್ಲೂಕು ಪಂಚಾಯತಿಗಳ ಗ್ರೂಪ್-ಸಿ ವೃಂದದ 100 ಪ್ರಥಮ ದರ್ಜೆ ಸಹಾಯಕರ ಹಾಗೂ 200 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.
ಕಾರ್ಯಪಾಲಕ ಅಭಿಯಂತರರು (ಸ್ಟ್ರಕ್ಟರಲ್ ಡಿಸೈನ್) ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು (ಸ್ಟ್ರಕ್ಟರಲ್ ಡಿಸೈನ್) ಹುದ್ದೆಗೆ ಸಂಸ್ಥೆಯ ಸಿ&ಆರ್ ನಿಯಮಾವಳಿಯಲ್ಲಿ ಗೊತ್ತುಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಪಡೆದಿರುವ ಅಧಿಕಾರಿಗಳು ಪ್ರಸ್ತಕ ಲಭ್ಯವಿರುವುದಿಲ್ಲ. ಕಂಪನಿ ಕಾರ್ಯದರ್ಶಿ ಹುದ್ದೆಗೆ ಸಂಸ್ಥೆಯ ನಿಯಮಾವಳಿಯಲ್ಲಿ ಗೊತ್ತುಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಪಡೆದಿರುವ ಹಾಗೂ ಸಾಕಷ್ಟು ಅನುಭವವಿರುವ ಅಧಿಕಾರಿಯನ್ನು ಪ್ರಸ್ತುತ ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆ.












Click it and Unblock the Notifications