ಕೆಪಿಎಸ್‌ಸಿ ನೇಮಕಾತಿ : ಮಾ.4 ಅರ್ಜಿ ಹಾಕಲು ಕೊನೆ ದಿನ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 08 : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಎ' ವೃಂದದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಗ್ರೂಪ್ 'ಸಿ'ವೃಂದದ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2016.

ಗ್ರೂಪ್ 'ಎ' ವೃಂದದ ಪ್ರಾದೇಶಿಕ ಸಾರಿಗೆ ಅಧಿಕಾರಿ (Regional Transport Officer) 11 ಹುದ್ದೆಗಳು (ಹೈ-ಕ 2 ಹುದ್ದೆಗಳು), ಗ್ರೂಪ್ 'ಸಿ'ವೃಂದದ ಮೋಟಾರು ವಾಹನ ನಿರೀಕ್ಷಕರ (Motor Vehicles Inspector) 150 (ಹೈ-ಕ 23) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. [police constable ನೇಮಕಾತಿ : ಫೆ.9 ಅರ್ಜಿ ಸಲ್ಲಿಕೆಗೆ ಕೊನೆ ದಿನ]

ಅಭ್ಯರ್ಥಿಗಳು ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಅರ್ಜಿಯ ನಿಗದಿತ ಅಂಕಣದಲ್ಲಿ ಮಾಹಿತಿಯನ್ನು ನೀಡಿ, ಎರಡೂ ಹುದ್ದೆಗಳಿಗೆ ಸಂಬಂಧಿಸಿದ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ನೀಡಿರುವ ಸೂಚನೆಗಳನ್ನು ಓದಿಕೊಂಡು ಭರ್ತಿ ಮಾಡಬೇಕು. ತಪ್ಪು ಮಾಹಿತಿ ನೀಡಿದ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ನೇಮಕಾತಿಯ ವಿವರಗಳು ಚಿತ್ರಗಳಲ್ಲಿ.....[2016ರಲ್ಲಿ 2.5 ಲಕ್ಷ ಮಂದಿಗೆ ಐಟಿ ಉದ್ಯೋಗಾವಕಾಶ]

ಇಂಗ್ಲಿಶ್ ನಲ್ಲಿ ಓದಿ

ಆರ್‌ಟಿಓ ನೇಮಕಾತಿ 2016

ಆರ್‌ಟಿಓ ನೇಮಕಾತಿ 2016

ಅಭ್ಯರ್ಥಿಗಳು ನೆನಪಿಟ್ಟುಕೊಳ್ಳಬೇಕಾದ ದಿನಾಂಕ
* ಫೆ.4ರಿಂದ ಮಾರ್ಚ್ 4ರ ರಾತ್ರಿ 11.45ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.
* ಅರ್ಜಿ ಶುಲ್ಕ ಪಾವತಿ ಮಾಡಲು ಮಾರ್ಚ್ 5 ಕೊನೆಯ ದಿನ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿಯ ಜೊತೆಗೆ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ಅರ್ಹತೆ, ಪ್ರವರ್ಗ 2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳು 300 ರೂ., ಪ.ಜಾ/ಪ,.ಪಂ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಗೊಳಿಸಲಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ

ಅರ್ಜಿ ಸಲ್ಲಿಸಲು ವಿಳಾಸ

ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಮತ್ತು ಕನ್ನಡದಲ್ಲಿ ನೇಮಕಾತಿ ಆದೇಶ ಓದಲು ವಿಳಾಸ ಇಲ್ಲಿದೆ.

ಅಭ್ಯರ್ಥಿಗಳಿಗೆ ಷರತ್ತುಗಳು

ಅಭ್ಯರ್ಥಿಗಳಿಗೆ ಷರತ್ತುಗಳು

*ಭಾರತೀಯ ನಾಗರೀಕನಾಗಿರತಕ್ಕದ್ದು
* ಅಭ್ಯರ್ಥಿಯು ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿರಬೇಕು
* ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗಿರುವುದಿಲ್ಲ.

ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆಗಳು

ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆಗಳು

ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ವೆಬ್‌ ಸೈಟ್‌ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.

ನೇಮಕಾತಿ ವಿಧಾನ

ನೇಮಕಾತಿ ವಿಧಾನ

ಸ್ಮರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷಾ ಪತ್ರಿಕೆಗಳು : ಪತ್ರಿಕೆ - 1 ಸಾಮಾನ್ಯ ಪತ್ರಿಕೆ 200 ಅಂಕಗಳು, ಅವಧಿ ಒಂದೂವರೆ ಗಂಟೆಗಳು. ಪತ್ರಿಕೆ - 2 ನಿರ್ದಿಷ್ಟ ಪತ್ರಿಕೆ 200 ಅಂಕಗಳು ಅವಧಿ 2 ಗಂಟೆಗಳು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Karnataka Public Service Commission (KPSC) has invited online applications for the post of 161 Motor Vehicles Inspector, Regional Transport Officer(RTO) posts. March 4, 2016 last date for submit application.
Please Wait while comments are loading...