ರಾಜ್ಯದ ಗ್ರಾ.ಪಂ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿಗೆ ತಡೆ
ಬೆಂಗಳೂರು, ಜನವರಿ 05: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದರಂತೆ 6000 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಲು ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ್ದ ಆದೇಶವನ್ನು ತಡೆಹಿಡಿಯಲಾಗಿದೆ.
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲಾತಿ ನೀಡಿರಲಿಲ್ಲ. ಇದರಿಂದ ಇದಕ್ಕೆ ಹೈಕ ಭಾಗದಿಂದ ಹಲವು ಪ್ರತಿಭಟನೆಗಳು ನಡೆದಿದ್ದವು. ಬಳಿಕ ಎಚ್ಚೆತ್ತಿರುವ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ನೀಡಿ ಜನವರಿ ಆದೇಶ ಹೊರಡಿಸಿದೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದರಂತೆ 6000 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಮಾಡಿಕೊಳ್ಳಲು 2017, ನವೆಂಬರ್ 15ರಂದು ಆದೇಶ ಹೊಡಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು.












Click it and Unblock the Notifications