Job Recruitment: ರಾಜ್ಯ ಕ್ರೀಡಾ ಇಲಾಖೆಯಲ್ಲಿ ಉದ್ಯೋಗವಕಾಶ, ಏಪ್ರಿಲ್ 15ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 21: ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದ 'ರಾಜ್ಯ ಕ್ರೀಡಾ ಪ್ರಾಧಿಕಾರ'ವು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಖಾಲಿ ಇರುವ ಫಿಟ್ನಸ್ ತರಬೇತುದಾರರ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಒಟ್ಟು ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ 14 ಫಿಟ್ನಸ್ ತರಬೇತುದಾರರ ಸೇವೆ ಅಗತ್ಯ ಇದೆ. ಅಷ್ಟು ಹುದ್ದೆಗಳ ನೇಮಕಾತಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಯವರೆಗೆ ಇರಲಿದೆ. ಆಕರ್ಷಕ ವೇತನ ನೀಡಲಾಗುವುದು ಎಂದು ಅಧಿಸೂಚನೆ ಮಾಹಿತಿ ನೀಡಿದೆ.

Karnataka Sports Authority Recruitment for 14 Fitness Trainers Apply by April 15

ಶೈಕ್ಷಣಿಕ ಅರ್ಹತೆ

ಅರ್ಜಿ ಸಲ್ಲಿಸುವವ ಅಭ್ಯರ್ಥಿಗಳಿಗೆ ಕನ್ನಡ ಗೊತ್ತಿರಬೇಕು. 1ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಒಂದು ವೇಳೆ ಯಾವುದೇ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಇತರೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಯಸ್ಸಿನ ಮಿತಿ: ಗರಿಷ್ಠ 58 ವಯಸ್ಸಿನೊಳಗೆ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಇದು ಒಂದು ವರ್ಷದವರೆಗೆ ತಾತ್ಕಾಲಿಕವಾದ ನೇಮಕಾತಿ ಆಗಿರುತ್ತದೆ.

Karnataka Sports Authority Recruitment for 14 Fitness Trainers Apply by April 15

ಏಪ್ರಿಲ್ 15ರೊಳಗೆ ಅರ್ಜಿ ಹಾಕಿ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ ಏಪ್ರಿಲ್ 15ರ ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕಾಗಿರುತ್ತದೆ. ಅರ್ಜಿಯನ್ನು ನಿಗಧಿಪಡಿಸಿದ ದಿನಾಂಕದ ನಂತರ ಸ್ವೀಕರಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ನಿಗಧಿಪಡಿಸಲಾದ ಕೊನೆಯ ದಿನಾಂಕವನ್ನು ಸಾರ್ವತ್ರಿಕ ರಜೆಯೆಂದು ಘೋಷಿಸಿದಲ್ಲಿ ಮರುದಿನವನ್ನು ಅಂತಿಮ ದಿನಾಂಕವೆಂದು ಪರಿಗಣಿಸುವಂತೆ ಅಧಿಸೂಚನೆ ತಿಳಿಸಿದೆ.

ಅರ್ಜಿ ಶುಲ್ಕ ಇದೆಯೇ?

ನೇಮಕಾತಿ ಸಂದರ್ಶನಕ್ಕೆ ಆಹ್ವಾನಿಸದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮಾಹಿತಿ ನೀಡಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ನಿಗಧಿಪಡಿಸಿರುವ ಅರ್ಹತೆ ಮತ್ತು ಷರತ್ತು ಪೂರೈಸದ ಕಾರಣ ಅಂತಹ ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದಿಲ್ಲ. ಅರ್ಹತಾ ಮಾನದಂಡ ಪರಿಶೀಲಿಸಬೇಕು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಕೆಯ ವಿಳಾಸದ ವಿವರ

ಆಸಕ್ತರು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ರಿಜಿಸ್ಟರ್ ಅಂಚೆ ಮೂಲಕ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. 'ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001' ಇಲ್ಲಿಗೆ ಕಳುಹಿಸಬೇಕು.

ಲಕೋಟೆಯ ಮೇಲೆ "ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಯವರೆಗೆ ಫಿಟೈಸ್ ತರಬೇತುದಾರರ ಹುದ್ದೆಯ ನೇಮಕಾತಿ" ಎಂದು ಬರೆದು ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಜೊತೆಗೆ ಅರ್ಜಿಯನ್ನು ಭರ್ತಿಮಾಡುವ ಮತ್ತು ಸಲ್ಲಿಸುವ ಮುನ್ನ ಅಧಿಸೂಚನೆಯಲ್ಲಿ ತಿಳಿಸಿರುವ ಸೂಚನೆಗಳನ್ನು ಪರಿಶೀಲಿಸಬೇಕು. ಈ ಕೆಳಗಿನ ಸೂಕ್ತ ದಾಖಲೆ ದೃಢೀಕರಿಸಿ ಸಲ್ಲಿಸಬೇಕು.

ಅಭ್ಯರ್ಥಿಗಳು ಷರತ್ತುಗಳನ್ನು ಗಮನಿಸಿ

ತಡವಾಗಿ ಬಂದ, ಅಪೂರ್ಣ ಮತ್ತು ಸಹಿ ಮಾಡದ ಅರ್ಜಿಗಳನ್ನು ಪುರಸ್ಕರಿಸಲಾಗುವುದಿಲ್ಲ. ನೇಮಕಾತಿ ಪ್ರಕ್ರಿಯೆಯನ್ನು ಅದಕ್ಕೆಂದೆ ರಚಿಸಲಾದ ಆಯ್ಕೆ ಸಮಿತಿಯು ನಿರ್ವಹಿಸುತ್ತದೆ. ಅಂತಿಮವಾಗಿ ಆಯ್ಕೆ ಪ್ರಕ್ರಿಯೆಯು ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ವಿವೇಚನೆಗೆ ಒಳಪಟ್ಟಿರುತ್ತದೆ. ಪ್ರಾಧಿಕಾರದ ನಿರ್ಧಾರವೇ ಅಂತಿಮವಾಗಿರುತ್ತದೆ.

ನೇಮಕಾತಿಯಾದ ನಂತರ ಮತ್ತು ಸಂದರ್ಭಾನುಸಾರ ಅಭ್ಯರ್ಥಿಗಳನ್ನು ರಾಜ್ಯದ ಯಾವುದೇ ಸ್ಥಳಕ್ಕೆ ನಿಯುಕ್ತಿಗೊಳಿಸಬಹುದು. ಇದಕ್ಕೆ ಒಪ್ಪಿಗೆ ಇರುವವರು ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಎಲ್ಲ ಅಭ್ಯರ್ಥಿಗಳು ಈ ನಿರ್ಧಾರಕ್ಕೆ ಬದ್ಧರಾಗಿರಬೇಕು. ರಾಜ್ಯದ ಯಾವುದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಾಗಿರಬೇಕು. ಪ್ರಾಧಿಕಾರವೇ ನೇಮಕಾತಿ ರದ್ದುಪಡಿಸುವ ಅಧಿಕಾರ ಸಹ ಹೊಂದಿರುತ್ತದೆ.

ನೇಮಕಾತಿಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳು ರೂ. 100.00 ಛಾಪಾ ಕಾಗದದಲ್ಲಿ ನೇಮಕಾತಿ ಮತ್ತು ಸ್ಥಳ ನಿಯೋಜನೆ, ಇನ್ನಿತರೆ ವಿಷಯದ ಸಂಬಂಧವಾಗಿ ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡುವುದಿಲ್ಲ ಎಂದು ಮುಚ್ಚಳಿಕೆ ಸಲ್ಲಿಸಬೇಕು. ಯಾವುದೇ ನಕರಾತ್ಮಕ ಯತ್ನಗಳಿಗೆ ಅವಕಾಶ ಇರುವುದಿಲ್ಲ ಎಂದು ಅಧಿಸೂಚನೆ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+