KSAT Recruitment 2023 : ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ನೇಮಕಾತಿ, ಅರ್ಜಿ ಹಾಕಿ

ಬೆಂಗಳೂರು, ಜನವರಿ 16; ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಜನವರಿ 31ರೊಳಗೆ ಅರ್ಜಿ ಸಲ್ಲಿಸಬೇಕಿದೆ.

ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದದ ಶೀಘ್ರಲಿಪಿಗಾರ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ನೇಮಕಾತಿ) ನಿಯಮಗಳು 1993 ಹಾಗೂ ಅದರಡಿಯಲ್ಲಿ ಕಾಲಕಾಲಕ್ಕೆ ತಿದ್ದುಪಡಿ ಮಾಡಿರುವಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ 7. ಶೀಘ್ರಲಿಪಿಕಾರರ ಹುದ್ದೆಗೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಬೆಂಗಳೂರಿನ ಪ್ರಧಾನ ಪೀಠದಲ್ಲಾಗಲೀ ಬೆಳಗಾವಿ ಅಥವ ಕಲಬುರಗಿ ಪೀಠಗಳಲ್ಲಾಗಲಿ ನಿಯೋಜಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ಮೂರು ಪೀಠದಲ್ಲಿ ಕಾರ್ಯ ನಿರ್ವಹಣೆ ಮಾಡಲು ಸಿದ್ಧರಿರಬೇಕು.

Karnataka State Administrative Tribunal Recruitment 2023

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 30,350-58,250 ರೂ. ಗಳು. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ಜಾಲತಾಣದಲ್ಲಿ ಉಳಿದ ಮೂಲ ವೃಂದಕ್ಕೆ ನಿಗದಿಪಡಿಸಿರುವ ಅರ್ಜಿಯನ್ನು ಮಾತ್ರವೇ ಡೌನ್‌ಲೋಡ್‌ ಮಾಡಿಕೊಂಡು ಅಗತ್ಯ ದಾಖಲೆ ಲಗತ್ತಿಸಿ ಸಲ್ಲಿಕೆ ಮಾಡಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು 560009 ಇವರಿಗೆ ಅಂಚೆ ಮೂಲಕ ಅಥವ ಖುದ್ದಾಗಿ ಸಲ್ಲಿಸಬಹುದು.

ವಯೋಮಿತಿ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರ ತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿ ಮೀರರಬಾರದು. ಸಾಮಾನ್ಯ ವರ್ಗ 35, ಪ. ಜಾ/ ಪ. ಪಂ/ ಪ್ರವರ್ಗ-1 40 ವರ್ಷಗಳು. 2ಎ/ 2ಬಿ/ 3ಎ/ 3ಬಿ 38 ವರ್ಷಗಳು.

ವಿದ್ಯಾರ್ಹತೆ ವಿವರ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕೆಳಕಂಡ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಅರ್ಜಿಯ ನಿಗದಿತ ಅಂಕಣದಲ್ಲಿ ಸ್ಪಷ್ಟವಾಗಿ ನಮೂದಿಸಿರಬೇಕು ಹಾಗೂ ಅವುಗಳ ಒದೊಂದು ಛಾಯಾ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ(ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ; ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ. ಇತರ ವರ್ಗದ ಅಭ್ಯರ್ಥಿಗಳು 150 ರೂ. ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಡೌನ್‌ಲೋಡ್ ಮತ್ತು ಹೆಚ್ಚಿನ ಮಾಹಿತಿಗಾಗಿ www.ksat.karnataka.gov.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+