ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿ

ಬೆಂಗಳೂರು, ಅಕ್ಟೋಬರ್ 29; ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಮಂಡಳಿ ಗ್ರೂಪ್ 'ಬಿ' ಮತ್ತು ಗ್ರೂಪ್‌ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 23/11/2021 ಕೊನೆಯ ದಿನವಾಗಿದೆ.

ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು (2), ಪ್ರಥಮ ದರ್ಜೆ ಸಹಾಯಕರು (9), ತಾಂತ್ರಿಕ ಮೇಲ್ವಿಚಾರಕರು (5), ತಾಂತ್ರಿಕ ಸಹಾಯಕರು (13) ಸೇರಿದಂತೆ ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಭರ್ತಿ ಮಾಡಬೇಕು. ಭಾವಚಿತ್ರ/ ಸಹಿ/ ವಯೋಮಿತಿ/ ವಿದ್ಯಾರ್ಹತೆ ಹಾಗೂ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ಬಳಿಕ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬೇಕು.

ಶುಲ್ಕವನ್ನು ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಮುಖಾಂತರ ಸ್ವೀಕಾರ ಮಾಡಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಲು ಅವಕಾಶವಿಲ್ಲ. ದಾಖಲೆ ಒದಗಿಸದ, ಪರಿಪೂರ್ಣ ಮಾಹಿತಿ ಇರದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೊದಲು ಕಡ್ಡಾಯವಾಗಿ ಸೂಚನೆಗಳನ್ನು ಓದಿಕೊಳ್ಳಬೇಕು. ಅರ್ಜಿ ಸಲ್ಲಿಸಿದ ಬಳಿಕ ಒಂದು ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-22266852. ಇ-ಮೇಲ್ [email protected].

ಅರ್ಜಿ ಶುಲ್ಕದ ಮಾಹಿತಿ

ಅರ್ಜಿ ಶುಲ್ಕದ ಮಾಹಿತಿ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗ/ ಪ್ರವರ್ಗ 2 (ಎ)/ 2 (ಬಿ)/ 3 (ಎ)/ 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 800 ರೂ. ನಿಗದಿ ಡಿಸಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 400 ರೂ.ಗಳು. ಅಂಗವಿಕಲ/ ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು

ಅಭ್ಯರ್ಥಿಗಳಿಗೆ ಸೂಚನೆಗಳು

ಅರ್ಜಿ ಹಾಕುವ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಇದೇ ಮೊಬೈಲ್ ನಂಬರ್, ಇ-ಮೇಲ್ ಐಡಿಯನ್ನು ವ್ಯವಹಾರಗಳಿಗೆ ಬಳಕೆ ಮಾಡಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪತ್ರಗಳನ್ನು ಕಳಿಸುವುದಿಲ್ಲ. ಖಾದಿ ಮಂಡಳಿ ಜಾಲತಾಣವನ್ನು ಆಗಾಗ ಪರಿಶೀಲಿಸಬೇಕು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು.

ಅಭ್ಯರ್ಥಿಗಳಿಗೆ ಷರತ್ತುಗಳು

ಅಭ್ಯರ್ಥಿಗಳಿಗೆ ಷರತ್ತುಗಳು

ಅರ್ಜಿ ಸಲ್ಲಿಸುವವರು ಭಾರತೀಯ ನಾಗರೀಕನಾಗಿರಬೇಕು. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ, ಈಗಾಗಲೇ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಲ್ಲ.

ಅಭ್ಯರ್ಥಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು. ನೇಮಕಾತಿಯು ಕರ್ತವ್ಯಗಳ ದಕ್ಷತೆ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತನಾಗಿರಬೇಕು.

ಕೇಂದ್ರ ಅಥವ ಕರ್ನಾಟಕ ಅಥವ ಇತರೆ ಯಾವುದೇ ರಾಜ್ಯ ಸರ್ಕಾರದ ಯಾವುದೇ ಸಂಸ್ಥೆ/ ನಿಗಮ/ ಮಂಡಳಿಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವ ನೇಮಕಾತಿಗಳಿಂದ ಖಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಲ್ಲ.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2(ಎ), 2(ಬಿ), 3(ಎ), 3 (ಬಿ) ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವೆಬ್ ಸೈಟ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. http://khadi.karnataka.gov.in ವೆಬ್ ಸೈಟ್ ಮೂಲಕ 3 ಹಂತದಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಮೊದಲ ಹಂತದಲ್ಲಿ ಫ್ರೋಫೈಲ್ ಕ್ರಿಯೇಷನ್/ ಅಪ್‌ಡೇಷನ್, ಎರಡನೇ ಹಂತದಲ್ಲಿ ಅಪ್ಲಿಕೇಶನ್ ಸಬ್‌ಮಿಷನ್, ಮೂರನೇ ಹಂತದಲ್ಲಿ ಪೇಮೆಂಟ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+