ಕೆಜಿಎಫ್ : ಪೊಲೀಸ್ ಪೇದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕೋಲಾರ, ಜೂನ್ 14 : ಪೊಲೀಸ್ ಇಲಾಖೆ ಪೇದೆಗಳ ನೇಮಕಾತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಕೆಜಿಎಫ್‌ನಲ್ಲಿ 19 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ 13 ಹುದ್ದೆ, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ 4 ಹುದ್ದೆ, ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ 19 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
http://www.ksp.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಎಸ್ಪಿ ಬಿ.ಎಸ್. ಲೋಕೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಸಲು ಜೂನ್ 11 ಮತ್ತು 14ರಿಂದ ಅವಕಾಶ ಕಲ್ಪಿಸಲಾಗಿದೆ. ಸಿವಿಲ್‌ಗೆ ಜೂ.30 ಮತ್ತು ಡಿಎಆರ್‌ಗೆ ಜು.5 ಕೊನೆಯ ದಿನವಾಗಿರುತ್ತದೆ. ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಿವಿಲ್/ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಎಸ್.ಎಸ್.ಎಲ್.ಸಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳು ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.ksp.gov.inಗೆ ಭೇಟಿ ನೀಡಬಹುದಾಗಿದೆ.












Click it and Unblock the Notifications