ಕರ್ನಾಟಕ; ಸರ್ಕಾರಿ ನೇಮಕಾತಿಗಳು ಸಂಪೂರ್ಣ ಸ್ಥಗಿತ

ಬೆಂಗಳೂರು, ಅಕ್ಟೋಬರ್ 25 : ಕೋವಿಡ್ ಲಾಕ್ ಡೌನ್ ಪರಿಣಾಮ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಸರಿಪರಿಸಲು ಸರ್ಕಾರ ವಿವಿಧ ಕ್ರಮ ಕೈಗೊಂಡಿದೆ. ಎಲ್ಲಾ ಇಲಾಖೆಗಳ ನೇಮಕಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಏಕರೂಪ್ ಕೌರ್ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಮುಂದಿನ ಆದೇಶದ ತನಕ ಎಲ್ಲಾ ನೇಮಕಾತಿ ಸ್ಥಗಿತಗೊಳಿಸಲಾಗಿದೆ.

ಸಂಪನ್ಮೂಲ ಸಂಗ್ರಹ, ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ರೀತಿಯ ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡುವುದನ್ನು ಮುಂದಿನ ಆದೇಶದ ತನಕ ತಡೆ ಹಿಡಿಯಾಗಿದೆ ಎಂದು ತಿಳಿಸಿದೆ.

Karnataka Stopped All Department Recruitment

ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಇದು ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. ಬ್ಯಾಗ್ ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ರೀತಿಯ ನೇಮಕಾತಿಗೆ ಇದು ಅನ್ವಯ.

ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಇನ್ನಿತರ ಯಾವುದೇ ಆಯ್ಕೆ ಮಂಡಳಿಗಳಿಂದ ಯಾವುದೇ ಇಲಾಖೆಯಲ್ಲಿ ಒಂದೇ ಅಧಿಸೂಚನೆ ಮೂಲಕ ಆಯ್ಕೆಗೊಂಡು ಕಾರಣಾಂತರದಿಂದ ನೇಮಕಾತಿ ಆದೇಶ ಸಿಗದಿರುವ ಪ್ರಕರಣದಲ್ಲಿ ಸೇವಾ ಹಿರಿತನಕ್ಕೆ ಧಕ್ಕೆ ಆಗದಂತೆ ನೇಮಕಾತಿ ಮಾಡಿಕೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ.

ಆಡಳಿತ ಇಲಾಖೆಯಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವುದು ಬಾಕಿ ಇದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಇಲಾಖಾ ಕಾರ್ಯದರ್ಶಿಗಳ ಶಿಫಾರಸ್ಸಿನೊಂದಿಗೆ ಆರ್ಥಿಕ ಇಲಾಖೆಯ ಮುಂದಿನ ಪರಿಶೀಲನೆಗೆ ಕಳಿಸಲು ಸೂಚಿಸಲಾಗಿದೆ.

ಇಂತಹ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೇಮಕಾತಿಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಇದರಿಂದಾಗಿ ಸರ್ಕಾರಿ ನೌಕರಿ ಪಡೆಯಲು ಕಾಯುತ್ತಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+