ಹತ್ತು ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 29 : ಕರ್ನಾಟಕದಲ್ಲಿ ಖಾಲಿ ಇರುವ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

1588 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

10,000 ಶಿಕ್ಷಕರ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟಂಬರ್ 25,2017 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

Karnataka Teacher Recruitment 2017 Apply For 10000 Vacancies

ವಿದ್ಯಾರ್ಹತೆ: ಪದವಿ ಹಾಗೂ ಬಿ.ಇಡ್ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ: 14,550 ರಿಂದ 26,700 ರು. ತಿಂಗಳಿಗೆ.

ಪರೀಕ್ಷೆ ನಡೆಯುವ ದಿನಾಂಕಗಳು:
* 04/11/2017 ಹಾಗೂ 05/11/2017ರಂದು ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರದ 23 ಆಯಾ ಜಿಲ್ಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
*11/11/2017 ಹಾಗೂ 12/11/2017ರಂದು ಹೈದ್ರಾಬಾದ್ ಕರ್ನಾಟಕದ (371) 6 ಜಿಲ್ಲೆಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಡಿಆರ್ ಡಿಒನಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಪರೀಕ್ಷಾ ಶುಲ್ಕ: ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ, ವರ್ಗ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ 1 ಹುದ್ದೆಗೆ 250 ರು., 2 ಹುದ್ದೆಗೆ 400 ರು., 3 ಹುದ್ದೆಗಳಿಗೆ 550 ರು. ಶುಲ್ಕ ನಿಗದಿಪಡಿಸಲಾಗಿದೆ. ಇತರೆ ವರ್ಗದ ಅಭ್ಯರ್ಥಿಗಳಿಗೆ 500 ರು., 750 ರು., 1000 ರು. ಶುಲ್ಕ ಪಾವತಿಸಬೇಕಿದೆ.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, 2 ಎ, 2 ಬಿ, 3 ಎ, 3 ಬಿ ವರ್ಗದವರಿಗೆ 43 ವರ್ಷ, ಪರಿಶಿಷ್ಟ ಜಾತಿ, ಪಂಗಡ ಹಾಗೂ ವರ್ಗ 1 ಅಭ್ಯರ್ಥಿಗಳು, ವಿಶೇಷ ಚೇತನ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಇನ್ನು ಈ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Department of Public Instructions is calling for Online Applications for 10,000 Graduate Primary Teachers for 6-8 Classes. The applications have to be submitted by 25/09/2017. There are four examinations for the recruitment.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ