Government Jobs: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ

ಬೆಂಗಳೂರು, ಏಪ್ರಿಲ್.03: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆಬ್ರವರಿ 20 ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ, ಈಗ ಈ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ ಮಾಡಿ ಪ್ರಕಟಣೆ ಹೊರಡಿಸಿದೆ.

ಪ್ರಕಟಣೆಯಲ್ಲಿ ಇರುವುದೆನೆಂದರೆ, "ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ ಅಧಿಸೂಚನೆಯ ಕ್ರಮ ಸಂಖ್ಯೆ: 01 ರ ಶೈಕ್ಷಣಿಕ ವಿದ್ಯಾರ್ಹತೆಯನ್ನು ತಿದ್ದುಪಡಿ ಮಾಡಲಾಗಿದೆ".

Karnataka Village Administrative Officer Recruitment education Qualification Changed

1. ಶೈಕ್ಷಣಿಕ ವಿದ್ಯಾರ್ಹತೆ

ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)

* ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.

* ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.

* ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ.

* ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) (ಅಭ್ಯರ್ಥಿಗಳು ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)

Karnataka Village Administrative Officer Recruitment education Qualification Changed

ತಿದ್ದುಪಡಿ ಮಾಡಿರುವುದು ಏನನ್ನು?

ಸರ್ಕಾರದ ಪತ್ರ ಸಂಖ್ಯೆ: ಕಂಇ 240 ಬಿಎಸ್‌ಸಿ 2022 ದಿನಾಂಕ 13.03.2024 ರಲ್ಲಿ ಸೂಚಿಸಿರುವಂತೆ ಕ್ರಮ ಸಂಖ್ಯೆ: 01 ರ ಶೈಕ್ಷಣಿಕ ವಿದ್ಯಾರ್ಹತೆಯ ಕೊನೆಯ ಭಾಗವನ್ನು ತಿದ್ದುಪಡಿ ಮಾಡಲಾಗಿದ್ದು ಈ ಕೆಳಗಿನಂತೆ ಒದಿಕೊಳ್ಳುವುದು.

ಶೈಕ್ಷಣಿಕ ವಿದ್ಯಾರ್ಹತೆ

* ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ : ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021 ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)

* ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.

* ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.

* ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ.

* ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ)

(*ಐಟಿಐ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು* ಮಾತ್ರ ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು).

ವಿಶೇಷ ಸೂಚನೆ: ಸರ್ಕಾರದ ಆದೇಶ 19.02.2024. ರಂತೆ ಒಬ್ಬ ಅಭ್ಯರ್ಥಿಯು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುವುದರಿಂದ, ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಕಲ್ಯಾಣ - ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅರ್ಜಿ ಸಲ್ಲಿಸಿ ಆದ್ಯತೆಯನ್ನು ಸಹ ನಮೂದಿಸಬೇಕು. ಅದರಂತೆ ಕಲ್ಯಾಣ - ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅಭ್ಯರ್ಥಿಗಳ ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+