ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24; ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಹಂತ-ಹಂತವಾಗಿ ಅಧಿಸೂಚನೆ ಪ್ರಕಟವಾಗಲಿದೆ.

ಜಲಸಂಪನ್ಮೂಲ ಸಚಿವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಯಾವಾಗ ಪ್ರಕಟವಾಗಲಿದೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಕಾಲಮಿತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕರ್ನಾಟಕದ ಹೈಕೋರ್ಟ್ ನೇಮಕಾತಿ; ಸ್ನಾತಕೋತ್ತರ ಪದವೀಧರರು ಅರ್ಜಿ ಹಾಕಿ ಕರ್ನಾಟಕದ ಹೈಕೋರ್ಟ್ ನೇಮಕಾತಿ; ಸ್ನಾತಕೋತ್ತರ ಪದವೀಧರರು ಅರ್ಜಿ ಹಾಕಿ

ಖಾಲಿ ಇರುವ ಹುದ್ದೆಗಳನ್ನು ಹಾಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ/ ನೌಕರರನ್ನು ಅನ್ಯ ಕರ್ತವ್ಯದ ಮೇಲೆ ಹಾಗೂ ಹೆಚ್ಚುವರಿ ಪ್ರಭಾರಿಯಲ್ಲಿರಿಸಿಕೊಂಡು ಕಾರ್ಯ ನಿರ್ವಹಣೆ ಮಾಡಲಾಗುತ್ತಿದೆ. ಆದ್ದರಿಂದ ಕಾಲಮಿತಿಯಲ್ಲಿ ಹುದ್ದೆಗಳ ಭರ್ತಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿ

Karnataka Water Resources Department Recruitment More Than 5 Thousand Post

ನೇರ ನೇಮಕಾತಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಮುಂಬಡ್ತಿಯಿಂದ ತುಂಬ ಬೇಕಾದ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವರು ಹೇಳಿದ್ದಾರೆ. ಆಸಕ್ತರು ನೇಮಕಾತಿಗಾಗಿ ತಯಾರಿಯನ್ನು ಮಾಡಿಕೊಳ್ಳಬಹುದಾಗಿದೆ. ಅಧಿಸೂಚನೆ ಪ್ರಕಟವಾಗುತ್ತಿದ್ದಂತೆ ಅರ್ಜಿಗಳನ್ನು ಸಲ್ಲಿಸಲು ಸಹಾಯಕವಾಗಲಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುತ್ತದೆ.

ಕರ್ನಾಟಕ; ಶಿಕ್ಷಕ, ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರ ಮಾಹಿತಿ ಕರ್ನಾಟಕ; ಶಿಕ್ಷಕ, ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರ ಮಾಹಿತಿ

ಯಾವ-ಯಾವ ಹುದ್ದೆ; ಅಸಿಸ್ಟೆಂಟ್ ಇಂಜಿನಿಯರ್ 1020. ಪ್ರಥಮ ದರ್ಜೆ ಸಹಾಯಕ 399. ದ್ವಿತೀಯ ದರ್ಜೆ ಸಹಾಯಕ 467. ಜೂನಿಯರ್ ಇಂಜಿನಿಯರ್ 697. ರೆವಿನ್ಯು ಇನ್ಸ್‌ಪೆಕ್ಟರ್ 21 ಹುದ್ದೆಗಳಿವೆ.

ಪ್ರಥಮ ದರ್ಜೆ ರೆವಿನ್ಯು ಸರ್ವೇಯರ್ 169. ಪ್ರಥಮ ದರ್ಜೆ ಲೆಕ್ಕ ಸಹಾಯಕ 80, ದ್ವಿತೀಯ ದರ್ಜೆ ಲೆಕ್ಕ ಸಹಾಯಕ 142 ಸೇರಿದಂತೆ ಒಟ್ಟು 5719 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಗ್ರಾಮ ಲೆಕ್ಕಿಗ ಹುದ್ದೆಗೆ 1.50 ಲಕ್ಷ ರೂ. ಲಂಚ; ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ತುಂಬಲು ಪ್ರಸ್ತುತ ಜಿಲ್ಲಾಡಳಿತದಿಂದ ಯಾವುದೇ ಅಧಿಸೂಚನೆಯನ್ನು ಹೊರಡಿಸಿರುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ.

ಕೊಡಗು ಜಿಲ್ಲೆಯ ಅಭ್ಯರ್ಥಿಯೊಬ್ಬರಿಗೆ ನಕಲಿ ನೇಮಕಾತಿ ಆದೇಶವನ್ನು ನೀಡಿರುವುದು ಮತ್ತು ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು 1.50 ರೂ. ಲಕ್ಷ ಹಣವನ್ನು ನೀಡುವಂತೆ ಕೇಳುತ್ತಿರುವ ಪ್ರಕರಣ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳನ್ನು ತುಂಬಲು ಪ್ರಸ್ತುತ ಜಿಲ್ಲಾಡಳಿತದಿಂದ ಯಾವುದೇ ಅಧಿಸೂಚನೆಯನ್ನು ಹೊರಡಿಸಿರುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವುದಿದ್ದಲ್ಲಿ ನಿಯಮಾನುಸಾರ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ವ್ಯಾಪಕ ಪ್ರಚಾರ ನೀಡಿ, ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ.

ಆದ್ದರಿಂದ ಈ ರೀತಿಯ ನಕಲಿ ನೇಮಕಾತಿ ಪತ್ರ ನೀಡುವ ಜಾಲಕ್ಕೆ ಸಾರ್ವಜನಿಕರು ಹಣ ನೀಡಿ ಮೋಸ ಹೋಗಬಾರದು ಎಂದು ಜಿಲ್ಲಾಡಳಿತ ಮನವಿಯನ್ನು ಮಾಡಿದೆ. ಈ ರೀತಿ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿ ಕೊಡುವುದಾಗಿ ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸಹ ಪ್ರಯತ್ನವನ್ನು ನಡೆಸುತ್ತಿದೆ.

Recommended Video

ಬ್ರಹ್ಮ -ವಿಷ್ಣು-ಮಹೇಶ್ವರ, ಮೂವರಲ್ಲಿ ಯಾರು ಶ್ರೇಷ್ಠ? | Oneindia Kannada

ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿ ಕೊಡುವುದಾಗಿ ಯಾವುದೇ ಅನಾಮಧೇಯ ಕರೆಗಳು ಬಂದಲ್ಲಿ ತಕ್ಷಣವೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ 08272-225500 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Karnataka water resources department recruitment soon. Recruitment will be held for more than 5000 post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X