ವಿವಿಧ ಹುದ್ದೆಗಳಿಗೆ ಅರ್ಜಿ ಕರೆದ ಕರೂರು ವೈಶ್ಯ ಬ್ಯಾಂಕ್
ಬೆಂಗಳೂರು, ಅಕ್ಟೋಬರ್ 10 : ಕರೂರು ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31, 2019 ಕೊನೆಯ ದಿನವಾಗಿದೆ.
ಎಕ್ಸಿಕ್ಯುಟೀವ್, ಬಿಡಿಎ ಮತ್ತು ಇತರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಲು ಅವಕಾಶವಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಲಾಗಿಲ್ಲ. ವೈಯಕ್ತಿಕ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಇ-ಮೇಲ್ ಇಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸರಿಯಾಗಿ, ಕಡ್ಡಾಯವಾಗಿ ನಮೂದಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಬಹುದಾಗಿದೆ












Click it and Unblock the Notifications