KAS: ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿಲ್ಲ ಎಂದ ಕೆಪಿಎಸ್‌ಸಿ
ಬೆಂಗಳೂರು, ಫೆಬ್ರವರಿ 16: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಆರೋಪವಿದೆ. ಈಗಾಗಲೇ ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಆಯ್ಕೆಗೊಂಡವರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಗಳನ್ನು ಮೊದಲು 2024 ಆಗಸ್ಟ್‌ನಲ್ಲಿ ನಡೆಸಿತ್ತು. ಆದರೆ ಕನ್ನಡ ಪತ್ರಿಕೆಯಲ್ಲಿನ ಭಾಷಾಂತರದ ಗೊಂದಲದ ಕಾರಣ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಲಾಗಿತ್ತು.

ಆದದ್ದರಿಂದ ದಿನಾಂಕ 29-12-2024ರಂದು ಮರು ಪರೀಕ್ಷೆ ನಡೆಸಲಾಗಿತ್ತು. ಈ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆದರೆ ಡಿಸೆಂಬರ್‌ನಲ್ಲಿ ನಡೆದ ಮರು ಪರೀಕ್ಷೆಯಲ್ಲಿಯೂ ಕನ್ನಡ ತಪ್ಪುಗಳಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ.
ಕೆಪಿಎಸ್‌ಸಿ ಸ್ಪಷ್ಟನೆ: ಈ ಆರೋಪಗಳ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ಪಷ್ಟನೆಯೊಂದನ್ನು ನೀಡಿದೆ. ಈ ಆರೋಪವು ಸರಿಯಲ್ಲ ಎಂದು ಮತ್ತು 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದಿಲ್ಲವೆಂದು ಆಯೋಗವು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ.
ಪ್ರಕಟಣೆಯಲ್ಲಿ ಆಯೋಗ ಆಯೋಗವು ಇತ್ತೀಚೆಗೆ ಪ್ರಕಟಿಸಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆಯೆಂದು ಸಮಾಜದ ಕೆಲವೊಂದು ವರ್ಗಗಳು ಆರೋಪಿಸಿದ್ದು, ಈ ವಿಷಯದ ಕುರಿತು ಕರ್ನಾಟಕ ಲೋಕಸೇವಾ ಆಯೋಗವು ಹಿಂದಿನ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳ ಮಾಹಿತಿಯನ್ನು ಪರಿಶೀಲಿಸಿದೆ.
2017-18ರಲ್ಲಿ ಒಟ್ಟು 106 ಹುದ್ದೆಗಳು ಮತ್ತು 2023-24ರಲ್ಲಿ 384 ಹುದ್ದೆಗಳಿದ್ದು, ಇದಕ್ಕೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ 2017-18ರಲ್ಲಿ ಅನುಪಾತ 1:20 ಇದ್ದು, 2023-24ರ ಹುದ್ದೆಗಳಿಗೆ ಅನುಪಾತ 1:15 ಇರುತ್ತದೆ.
ಮುಂದುವರೆದು, ಈ ವಿಷಯದ ಬಗ್ಗೆ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ನು ನಡೆಸಿದ ನಂತರ 2023-24ರಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ತೆಗೆದುಕೊಂಡು ಮುಖ್ಯ ಪರೀಕ್ಷೆಗೆ ಅರ್ಹರಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಸಂಖ್ಯೆಗೂ, ಗೆಜೆಟೆಡ್ ಪ್ರೊಬೇಷನರ್ 2017-18ರಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಯನ್ನು ತೆಗೆದುಕೊಂಡು ಅರ್ಹರಾಗಿದ್ದವರ ಸಂಖ್ಯೆಗೂ ಹೋಲಿಸಿದಲ್ಲಿ 2023-24ರಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಆಯ್ಕೆ ಅನುಪಾತವು ಶೇ 6.50ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿರುತ್ತದೆ ಎಂದು ಹೇಳಿದೆ.
ಆದ್ದರಿಂದ ಈ ಆರೋಪವು ಸರಿಯಲ್ಲವೆಂದು ಮತ್ತು 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದಿಲ್ಲವೆಂದು ಆಯೋಗವು ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದೆ.
2024 ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ತಪ್ಪುಗಳು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಬಳಿಕ ಡಿಸೆಂಬರ್ 29ರಂದು ಮರು ಪರೀಕ್ಷೆಗಳನ್ನು ನಡೆಸಲಾಗಿತ್ತು.
ಬೃಹತ್ ಪ್ರತಿಭಟನೆ: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡಿಗ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಫೆಬ್ರವರಿ 18ಕ್ಕೆ ಹಮ್ಮಿಕೊಳ್ಳಲಾಗಿದೆ.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಈ ಬೃಹತ್ ಪ್ರತಿಭಟನೆಯನ್ನು ದಿನಾಂಕ 18-2-2025 ಮಂಗಳವಾರ ಬೆಳಗ್ಗೆ 11 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನ, ಬೆಂಗಳೂರು ಇಲ್ಲಿ ನಡೆಸಲಾಗುತ್ತದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications