KAS: ಕೆಎಎಸ್ ಪೂರ್ವಭಾವಿ ಪರೀಕ್ಷೆ, ಸಿದ್ದರಾಮಯ್ಯಗೆ ಆರ್. ಅಶೋಕ ಪತ್ರ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಬಹಳ ಚರ್ಚೆಯ ವಿಷಯವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಪಶ್ನೆ ಪತ್ರಿಕೆಯ ಕನ್ನಡ ದೋಷ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪೂರ್ವಭಾವಿ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದ್ದು, ಈಗ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಸಹ ಘೋಷಣೆ ಮಾಡಲಾಗಿದೆ.
ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆ ಕುರಿತ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸರ್ಕಾರದ ಗಮನ ಸೆಳೆದಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಆಶ್ವಾಸನೆ ಕೊಟ್ಟಂತೆ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ರದ್ದು ಪಡಿಸಿ, ಮರು ಪರೀಕ್ಷೆಗೆ ಆದೇಶಿಸುವ ಮೂಲಕ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ 70,000ಕ್ಕೂ ಹೆಚ್ಚು ಗ್ರಾಮೀಣ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆರ್. ಅಶೋಕ ಪತ್ರದ ವಿವರ: ಆರ್. ಅಶೋಕ ತಮ್ಮ ಪತ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು 2023-24 ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ ಪಿಎಸಸಿ 509/ ಇ(1)/ 2023-24, ದಿನಾಂಕ 26-02-2024ರಂದು ಹೊರಡಿಸಲಾಗಿತ್ತು.
ದಿನಾಂಕ 27/08/2024ರಂದು ಪೂರ್ವಭಾವಿ ಪರೀಕ್ಷೆ ನಡೆಸಿದ KPSC 53 ಗಂಭೀರ ಭಾಷಾಂತರ ಲೋಪವೆಸಗಿತ್ತು. ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಪ್ರಶ್ನೆ ಅರ್ಥ ಮಾಡಿಕೊಳ್ಳುವಲ್ಲಿ ತುಂಬಾ ಕಷ್ಟವಾಗಿತ್ತು. ದಿನಾಂಕ 02/09/2024 ರಂದು ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಭಾಷಾಂತರ ಲೋಪದಿಂದ ಅನ್ಯಾಯವಾಗಿದೆ ಎಂದು ಸ್ವತಂತ್ರ ಉದ್ಯಾನವನದಲ್ಲಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡಿದ್ದರಿಂದ ಮುಖ್ಯಮಂತ್ರಿಗಳಾದ ತಾವು ತಮ್ಮ ಟ್ವಿಟ್ಟರ್ ಖಾತೆಯಿಂದ ಮರುಪರೀಕ್ಷೆಗೆ ಆದೇಶ ಹೊರಡಿಸಿದಿರಿ.
KPSC ಮತ್ತೆ ಪೂರ್ವಭಾವಿ ಮರು ಪರೀಕ್ಷೆಯನ್ನು ದಿನಾಂಕ 29/12/2024 ರಂದು ನಡೆಸಿತ್ತು. ಈ ಪರೀಕ್ಷೆಯಲ್ಲಿಯೂ ಮತ್ತದೇ ಭಾಷಾಂತರ ಲೋಪವೆಸಗಿದ KPSC ಸರಿಸುಮಾರು 79ಕ್ಕೂ ಹೆಚ್ಚು ಭಾಷಾಂತರ ಲೋಪವಾಗಿ ಕನ್ನಡ ಮಾಧ್ಯಮದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುತ್ತದೆ.
ರಾಜ್ಯದ ಹೆಸರಾಂತ ಸಾಹಿತಿಗಳು, ಸ್ವಾಮೀಜಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ತಮಗೆ ಗಂಭೀರ ಭಾಷಾಂತರ ಲೋಪದ ಬಗ್ಗೆ ಪತ್ರ ಬರೆದು ತಮ್ಮ ಗಮನಸೆಳೆದಿರುತ್ತಾರೆ. ವಿದ್ಯಾರ್ಥಿಗಳು ಆಗಿರುವ ಅನ್ಯಾಯದ ವಿರುದ್ಧ ನಿರಂತರವಾಗಿ ಸ್ವತಂತ್ರ ಉದ್ಯಾನವನದಲ್ಲಿ ಹೋರಾಟ ಮಾಡಿಕೊಂಡು ಬರುತಿದ್ದಾರೆ. ಅಹೋರಾತ್ರಿ ಧರಣಿ, ರಕ್ತಪತ್ರ ಚಳುವಳಿ, ಧಾರವಾಡದಲ್ಲಿ 10,000 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದಾರೆ.
ಧಾರವಾಡ ದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿರುತ್ತಾರೆ. ಇದು ತಮ್ಮ ಗಮನಕ್ಕೆ ಬಂದಿರುತ್ತದೆ ಎಂದುಭಾವಿಸುತ್ತೇನೆ. ಇದರ ಮಧ್ಯ ಕಳೆದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕನಾಗಿ ನಾನು ಭಾಷಾಂತರ ಲೋಪದ ಬಗ್ಗೆ ತಮ್ಮ ಗಮನಸೆಳೆದು ಸುಧೀರ್ಘವಾಗಿ ಸದನದಲ್ಲಿ ಮಾತನಾಡಿದ್ದು, ಕರ್ನಾಟಕ ಲೋಕ ಸೇವಾ ಆಯೋಗ ನಡೆಸಿದ ಕೆಎಎಸ್ ಮರು ಪರೀಕ್ಷೆಯಲ್ಲಿ ಆಗಿರುವ ಭಾಷಾಂತರ ಲೋಪ-ದೋಷಗಳ ಬಗ್ಗೆ ತಮ್ಮ ಗಮನಸೆಳೆದಿರುತ್ತೇನೆ ಎಂದು ಅಶೋಕ ಪತ್ರದಲ್ಲಿ ವಿವರಿಸಿದ್ದಾರೆ.
ಇದಕ್ಕೆ ಉತ್ತರವಾಗಿ ತಾವುಗಳು, "ಯಾವುದೇ ಕಾರಣಕ್ಕೂ ನಾನು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆದ ಅನ್ಯಾಯವನ್ನು ಸರಿಪಡಿಸುತ್ತೇನೆ." ಎಂದು ಹೇಳಿರುತ್ತೀರಿ.
ಅದರಂತೆ, ನ್ಯಾಯಾಲದ ತೀರ್ಪು ಬಂದು ಮಾನ್ಯ ಉಚ್ಚನ್ಯಾಯಾಲಯದಲ್ಲಿ ಗಂಭೀರ ಭಾಷಾಂತರ ಲೋಪವಾಗಿರುವದನ್ನು ಅರಿತು ಉಚ್ಚನ್ಯಾಯಾಲಯದ ಮೆಟ್ಟಿಲೇರಿರುವ ಕೇವಲ 34 ಅಭ್ಯರ್ಥಿಗಳಿಗೆ ಮಾತ್ರ ಅತಿ ಕಡಿಮೆ ಸಮಯ ನೀಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿರುವುದು ಉಳಿದ 70 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುತ್ತದೆ.
34 ಅಭ್ಯರ್ಥಿಗಳು ಸಾಮಾಜಿಕ ನ್ಯಾಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು, ಆದರೆ ಘನ ನ್ಯಾಯಾಲಯ ಕೇವಲ 34 ಅಭ್ಯರ್ಥಿಗಳಿಗೆ ಅತಿ ಕಡಿಮೆ ಸಮಯ ನೀಡಿ ಅರ್ಜಿಸಲ್ಲಿಸಲು ಅವಕಾಶ ಮಾಡಿ ಕೇವಲ 8 ದಿನದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಟ್ಟಿದಕ್ಕೆ ಅವಕಾಶ ಪಡೆದ ಕೆಲವು ಅಭ್ಯರ್ಥಿಗಳು ಪರೀಕ್ಷೆ ಬರೆಯದಿರಲು ನಿರ್ಧಾರ ಮಾಡಿದ್ದಾರೆ.
ಆದುದರಿಂದ, ಮರು ಪರೀಕ್ಷೆಗೆ ಆದೇಶ ಹೊರಡಿಸಿ ಕನ್ನಡ ಮಾಧ್ಯಮದ ಗ್ರಾಮೀಣ ಭಾಗದ 70 ಸಾವಿರ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಿಕೊಡಬೇಕೆಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಆರ್. ಅಶೋಕ ಒತ್ತಾಯಿಸಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications