ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಕೇವಲ 5 ದಿನದಲ್ಲಿಯೇ ಫಲಿತಾಂಶ ಪ್ರಕಟಿಸಿ ದಾಖಲೆ ಬರೆದ KEA

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊತ್ತು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪರೀಕ್ಷೆ ಬರೆದಿದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿಸುದ್ದಿ ನೀಡಿದೆ. ಪರೀಕ್ಷೆ ಮುಗಿದ ಕೇವಲ ಐದು ದಿನಗಳ ಅಂತರದಲ್ಲಿ ತಾತ್ಕಾಲಿಕ ಫಲಿತಾಂಶವನ್ನ ಪ್ರಕಟಿಸುವ ಮೂಲಕ ಕೆಇಎ ಹೊಸ ದಾಖಲೆ ಬರೆದಿದೆ.

ಸೆಪ್ಟೆಂಬರ್ 6 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಅಂಕಗಳ ಪಟ್ಟಿಯನ್ನ ಇಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಅಭ್ಯರ್ಥಿಗಳ ಬಹುದಿನಗಳ ನಿರೀಕ್ಷೆಗೆ ಪ್ರಾಧಿಕಾರವು ಅತಿ ವೇಗವಾಗಿ ತೆರೆ ಎಳೆದಿದೆ.

KEA Announces CAR DAR Police Constable Exam Provisional Results in a Record 5 Days

ರಾಜ್ಯ ಪೊಲೀಸ್ ಇಲಾಖೆಯು ಜೂನ್ 2026ರಲ್ಲಿ ಅಧಿಸೂಚಿಸಿದ್ದ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಮುಗಿದ ತಕ್ಷಣವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಅತ್ಯಂತ ವೇಗವಾಗಿ ಮತ್ತು ಪಾರದರ್ಶಕವಾಗಿ ಮೌಲ್ಯಮಾಪನ ಪ್ರಕ್ರಿಯೆಗಳನ್ನ ಪೂರ್ಣಗೊಳಿಸಿದೆ.

ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರ ನೇತೃತ್ವದಲ್ಲಿ ಇಡೀ ಪ್ರಕ್ರಿಯೆ ಚುರುಕಾಗಿ ನಡೆದಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಇತಿಹಾಸದಲ್ಲಿಯೇ ಕೇವಲ ಐದು ದಿನಗಳಲ್ಲಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿರುವುದು ಒಂದು ಮಹತ್ವದ ಮೈಲುಗಲ್ಲಾಗಿದೆ.

ರಾಜ್ಯದ ನಾನಾ ಭಾಗಗಳಿಂದ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು, ಇದೀಗ ತಕ್ಷಣವೇ ತಮ್ಮ ಅಂಕಗಳನ್ನ ಪರಿಶೀಲಿಸಿಕೊಳ್ಳಬಹುದಾಗಿದೆ.

ಪರಿಷ್ಕೃತ ಕೀ ಉತ್ತರಗಳ ಪ್ರಕಟಣೆ

ಪರೀಕ್ಷೆ ನಡೆದ ಮರುದಿನವೇ, ಅಂದರೆ ಸೆಪ್ಟೆಂಬರ್ 7ರಂದು ಕೆಇಎ ಕೀ ಉತ್ತರಗಳನ್ನ ಪ್ರಕಟಿಸಿತ್ತು. ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಆನ್‌ಲೈನ್ ಮೂಲಕ ಸಲ್ಲಿಸಲು ಸೆಪ್ಟೆಂಬರ್ 9ರ ಬೆಳಿಗ್ಗೆ 10.30ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನ ವಿಷಯ ತಜ್ಞರ ಸಮಿತಿಯ ಮೂಲಕ ಕೂಲಂಕಷವಾಗಿ ಪರಿಶೀಲನೆ ನಡೆಸಿದ ಪ್ರಾಧಿಕಾರವು, ಸೆಪ್ಟೆಂಬರ್ 10ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಇದೀಗ ಆ ಅಂತಿಮ ಪರಿಷ್ಕೃತ ಕೀ ಉತ್ತರಗಳ ಆಧಾರದ ಮೇಲೆ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನ ಸಿದ್ಧಪಡಿಸಿ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ತ್ವರಿತಗತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದು ಅಭ್ಯರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಕೆಇಎ ಸಿಎಆರ್ ಡಿಎಆರ್ ಫಲಿತಾಂಶ 2026: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಪ್ರಸ್ತುತ ಬಿಡುಗಡೆಯಾಗಿರುವುದು ತಾತ್ಕಾಲಿಕ ಫಲಿತಾಂಶವಾಗಿದ್ದು, ಅಭ್ಯರ್ಥಿಗಳು ತಾವು ಗಳಿಸಿದ ಅಂಕಗಳ ಕುರಿತು ಯಾವುದೇ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಮುಕ್ತ ಅವಕಾಶ ನೀಡಲಾಗಿದೆ. ಫಲಿತಾಂಶದ ಬಗ್ಗೆ ಅಸಮಾಧಾನ ಅಥವಾ ಆಕ್ಷೇಪಣೆ ಇದ್ದಲ್ಲಿ, ಅಭ್ಯರ್ಥಿಗಳು ಸೆಪ್ಟೆಂಬರ್ 14ರ ಸಂಜೆ 5.30ರ ಒಳಗೆ ಸೂಕ್ತ ಪೂರಕ ದಾಖಲೆಗಳೊಂದಿಗೆ ತಮ್ಮ ಆಕ್ಷೇಪಣೆಯನ್ನ ಸಲ್ಲಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿರುವ ನಿಗದಿತ ಲಿಂಕ್ ಮೂಲಕವೇ ಆಕ್ಷೇಪಣೆಗಳನ್ನ ಸಲ್ಲಿಸಬೇಕು. ಪೂರಕ ದಾಖಲೆಗಳಿಲ್ಲದ, ಸೂಕ್ತ ಆಧಾರವಿಲ್ಲದ ಹಾಗೂ ಕೇವಲ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನ ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+