KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ
ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳ ಏಪ್ರಿಲ್ 9ರಂದು ಉಪ ಚುನಾವಣೆ ಘೋಷಣೆ ಆಗಿದೆ. ಹೀಗಾಗಿ ಈ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 09ರಂದು ಚನಾವಣೆ ನಡೆಯಲಿದೆ. ಹೀಗಾಗಿ ಅಂದು ನಡೆಯಬೇಕಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಏ.10ರಂದು ನಡೆಸಲು ಪ್ರಾಧಿಕಾರ ತೀರ್ಮಾನಿಸಿದೆ. ವಿವಿಧ ಒಟ್ಟು 33 ಹುದ್ದೆಗಳಿಗೆ ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಅಂದು ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದು, ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗಬೇಕೆಂದು ತಿಳಿಸಲಾಗಿದೆ.

ವಿವಿಧ ವೃಂದಗಳ ದರ್ಜೆ 2 ಅಧಿಕಾರಿ (ಆಂತರಿಕ ಮತ್ತು ನೇರ ನೇಮಕಾತಿ ಹುದ್ದೆಗಳ) ಹುದ್ದೆಗಳ ನೇಮಕಾತಿ ಇದಾಗಿದೆ. ಈ ಖಾಲಿ ಹುದ್ದೆಗಳಿಗೆ ಅರ್ಹ ಒಟ್ಟು 2,500 ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರು ಬೆಂಗಳೂರು ಹಾಗೂ ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಒಟ್ಟು 33 ಹುದ್ದೆಗಳಿಗೆ ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಅಂದು ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದು, ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
NWKRTC ಖಾಲಿ ಹುದ್ದೆಗಳ ಮಾಹಿತಿ
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಆಡಳಿತಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಬಹುದು. ಸದ್ಯದಲ್ಲೇ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://cetonline.karnataka.gov.in/kea/ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ.












Click it and Unblock the Notifications