ಪಿಡಿಒ, ಗ್ರೇಡ್-1 ನೇಮಕಾತಿ ದಾಖಲಾತಿಗಳ ಪರಿಶೀಲನೆ ದಿನಾಂಕ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 01: ಗ್ರಾಮ ಪಂಚಾಯಿತಿ ಅಭಿವೃದ್ದಿ ಹಾಗೂ ಕಾರ್ಯದರ್ಶಿ ಗ್ರೇಡ್-1 ವೃ೦ದದ ಹುದ್ದೆಗಳ ಅಂತಿಮ ಪಟ್ಟಿಯನ್ನು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ದಿನಾಂಕ 16-08-2017ರಿಂದ 19-08-17ರ ವರೆಗೆ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಕರ್ನಾಟಕ ನ್ಯಾಯಮಂಡಳಿ ಮಧ್ಯಂತರ ಆದೇಶ ಹಿನ್ನಲೆಯಲ್ಲಿ ದಾಖಲಾತಿ ಪರಿಶೀಲನೆ ದಿನಾಂಕವನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

815 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು 809 ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳಿಗೆ 2016 ಸೆಪ್ಟೆಂಬರ್ ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.
ಮೂಲ ದಾಖಲಾತಿ ಪರಿಶೀಲನೆ ದಿನಾಂಕವನ್ನು ಮುಂದೂಡಿರುವ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.
ಈ ಹುದ್ದೆಗಳ ಅಂತಿಮ ಪಟ್ಟಿ ಸೇರಿದಂತೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ












Click it and Unblock the Notifications