ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಇಎ ನೇಮಕಾತಿ; ಕಿರಿಯ ಪಶುವೈದ್ಯಕೀಯ ಪರೀಕ್ಷಕರು, 250 ಹುದ್ದೆಗಳು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26; ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 5/10/2022 ರಿಂದ 4/11/2022ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಟ್ಟು 250 ಹುದ್ದೆಗಳನ್ನು ಪ್ರಾಧಿಕಾರವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಭರ್ತಿ ಮಾಡುತ್ತಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

SSC ನೇಮಕಾತಿ 2022: CGL ಗ್ರೂಪ್ ಬಿ ಹಾಗೂ ಸಿ ಹುದ್ದೆಗಳಿವೆ SSC ನೇಮಕಾತಿ 2022: CGL ಗ್ರೂಪ್ ಬಿ ಹಾಗೂ ಸಿ ಹುದ್ದೆಗಳಿವೆ

ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ , ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ಯಾವುದೇ ಇ- ಅಂಚೆ ಕಛೇರಿಯ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ, ಶುಲ್ಕವನ್ನು ಪಾವತಿಸದೇ ಹಾಗೂ ಭಾವಚಿತ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

Job News: ಓಲಾ ಕಂಪನಿಯಲ್ಲಿ 3000 ಉದ್ಯೋಗ ಅವಕಾಶ Job News: ಓಲಾ ಕಂಪನಿಯಲ್ಲಿ 3000 ಉದ್ಯೋಗ ಅವಕಾಶ

ಅರ್ಜಿ ಸಲ್ಲಿಸುವ ಹಂತ/ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಹಂತ/ ಪ್ರಕ್ರಿಯೆ

ಒಟ್ಟು 250 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಒಟ್ಟು ನಾಲ್ಕು ಹಂತಗಳು ಇದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ನೇಮಕಾತಿ ಅಧಿಸೂಚನೆಯನ್ನು ಕಡ್ಡಾಯವಾಗಿ ವಿವರವಾಗಿ ಓದಿಕೊಳ್ಳಬೇಕು.

ಮೊದಲನೇ ಹಂತದಲ್ಲಿ Application Submission.ಎರಡನೇ ಹಂತದಲ್ಲಿ Photo & Thumb impression upload, ಮೂರನೇ ಹಂತದಲ್ಲಿ Payment of Fees ಮತ್ತು ನಾಲ್ಕನೇ ಹಂತ Print application ಆಗಿದೆ.

ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ)(ಸಾಮಾನ್ಯ) ನಿಯಮಗಳು 2021ರ ಉಪ ನಿಯಮ 6(2) ಪ್ರಕಾರ ಸ್ಮರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ಮಾಡಲಾಗುವುದು.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ

ಶೈಕ್ಷಣಿಕ ವಿದ್ಯಾರ್ಹತೆ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗೆ ಅಭ್ಯರ್ಥಿಯು ಕರ್ನಾಟಕಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್‌ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ | ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್. (ಜೆಒಸಿ ಇನ್ ಡೈರಿ | (ಪೌಲ್ಫ್) ಕುಕ್ಕುಟ) ರಲ್ಲಿ ಉರ್ತ್ತೀಣರಾಗಿರಬೇಕು.

ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕ ನಿಗದಿಪಡಿಸಿದಾಗ, ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು, ಅಭ್ಯರ್ಥಿಗಳು ನಿಗದಿತ ದಿನಾಂಕ/ ಸಮಯಕ್ಕೆ ಮೂಲ ದಾಖಲೆಗಳ ಪರಿಶೀಲನೆಗೆ ಸ್ವಂತ ವೆಚ್ಚದಲ್ಲಿ ಪ್ರಾಧಿಕಾರದ ಕಛೇರಿಯಲ್ಲಿ ಹಾಜರಾಗತಕ್ಕದ್ದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ರೂ: ರೂ. 21400-500-22400-550-24600-600-27000-650-29600-750-32600-850-36000-950-39800-110042000.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು. ಪ್ರವರ್ಗ- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಪ.ಜಾ, ಪ.ಪಂ., ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 750 ಶುಲ್ಕ ಪಾವತಿಸಬೇಕು. ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ವಿಶೇಷ ಚೇತನ ಅಭ್ಯರ್ಥಿಗಳಿಗೆ
ರೂ. 500/

ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡಾಯವಾಗಿ ಪಾವತಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ ಅಥವಾ ಅದನ್ನು ಪ್ರಾಧಿಕಾರವು ನಡೆಸುವ ಇತರೆ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ.

ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ

ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ

ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗತಕದಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರತಕ್ಕದ್ದು. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್. ಎಸ್. ಎಲ್. ಸಿ. ಹಂತದಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವಾಗಿಟ್ಟುಕೊಂಡು ಸಿದ್ದಪಡಿಸಲಾಗಿರುತ್ತದೆ.

ಕಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಹೊಂದಲು ಅಭ್ಯರ್ಥಿಯು 1 ರಿಂದ 10 ನೇ ತರಗತಿವರೆಗೆ/ ಪಿಯುಸಿ / ಡಿಪ್ಲೊಮಾ / ಪದವಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರತಕ್ಕದ್ದು ಅಥವಾ ಎಸ್. ಎಸ್. ಎಲ್. ಸಿ / 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯಯವನ್ನಾಗಿ ವಾಸಂಗ ಮಾಡಿ ತೇರ್ಗಡೆ ಹೊಂದಿರತಕ್ಕದ್ದು.

ವಿಶೇಷ ಸೂಚನೆಗಳು

ವಿಶೇಷ ಸೂಚನೆಗಳು

ಮೀಸಲಾತಿಗಳನ್ನು ಕೋರುವ ಅಭ್ಯರ್ಥಿಗಳು ಸಂಬಂಧಿಸಿದ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲಿಯಿರುವಂತ ಪಡೆದಿಟ್ಟುಕೊಂಡು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು ತಪ್ಪಿದ್ದಲ್ಲಿ ಅಂತಹವರ ಮೀಸಲಾತಿಯನ್ನು ಪರಿಗಣಿಸಲಾಗುವುದಿಲ್ಲ.

ಅಪೂರ್ಣ ಅರ್ಜಿಯನ್ನು ಪ್ರಾಧಿಕಾರವು ಪರಿಗಣಿಸುವುದಿಲ್ಲ. ಅರ್ಜಿ ಶುಲ್ಕ ಪಾವತಿಸದ ಅರ್ಜಿಗಳನ್ನು ಪ್ರಾಧಿಕಾರವು ಪರಿಗಣಿಸುವುದಿಲ್ಲ. ಅರ್ಜಿಯಲ್ಲಿ ಸುಳ್ಳು ಮಾಹಿತಿ ದಾಖಲಿಸಿದಲ್ಲಿ, ಪ್ರಾಧಿಕಾರವು ಯಾವುದೇ ಪೂರ್ವ ಸೂಚನೆ ನೀಡದೆ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಯಾವುದೇ ಹಂತದಲ್ಲಿ ಆನ್ ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶವಿರುವುದಿಲ್ಲ 5) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ಎಲ್ಮಾ ಮೀಸಲಾತಿ ಪ್ರಮಾಣ ಪತ್ರಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಸಮಯದಲ್ಲಿ ಮೂಲ ದಾಖಲೆಗಳನ್ನು ಕಡಾಯವಾಗಿ ಹಾಜರುಪಡಿಸತಕ್ಕದ್ದು.

English summary
Karnataka Examination Authority (KEA) Recruitment; Apply for 250 junior veterinary inspector post. Candidates can apply till 4/11/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X