KEA Recruitment 2024: ಬೆಂಗಳೂರಲ್ಲಿ ಸರ್ಕಾರಿ ಹುದ್ದೆ ಖಾಲಿ ಇದೆ, ರೂ.2 ಲಕ್ಷವರೆಗೆ ವೇತನ
ಬೆಂಗಳೂರು, ಮಾರ್ಚ್ 07: ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು (KEA) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಹುಡುತ್ತಿರುವವರಿಗೆ 2 ಲಕ್ಷ ರೂಪಾಯಿವರೆಗಿನ ಉದ್ಯೋಗ ಅವಕಾಶವನ್ನು ನೀವು ಬೆಂಗಳೂರಿನಲ್ಲಿಯೇ ಪಡೆಯಬಹುದಾಗಿದೆ.
ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರ ತಿಳಿಸಿರುವ ಪ್ರಕಾರ, ಪ್ರೋಗ್ರಾಮರ್ ಮತ್ತು ಸೀನಿಯರ್ ಪ್ರೋಗ್ರಾಮರ್ ಸೇರಿದಂತೆ ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿ ಪ್ರಕ್ರಿಯೆ ನಡೆಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಕರ್ನಾಟಕ ಸರ್ಕಾರದ ಉದ್ಯೋಗ ಪಡೆಯಬಹುದು.

ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 12 ಕೊನೆ ದಿನವಾಗಿದೆ. ಇದಕ್ಕು ಮೊದಲು ಹುದ್ದೆಗೆ ಬೇಕಾದ ವಿದ್ಯಾರ್ಹತ, ವಿಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ವೇತನ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ತಿಳಿಯಿರಿ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು: ಪ್ರೋಗ್ರಾಮರ್
ಸೀನಿಯರ್ ಪ್ರೋಗ್ರಾಮರ್- 4
ಪ್ರೋಗ್ರಾಮರ್- 1
ಜೂನಿಯರ್ ಪ್ರೋಗ್ರಾಮರ್- 5
ಒಟ್ಟು ಹುದ್ದೆ: 10
ಪೋಸ್ಟಿಂಗ್ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಮಾರ್ಚ್ 12
ಶೈಕ್ಷಣಿಕ ಅರ್ಹತೆ
ಸೀನಿಯರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿಎಸ್/ಐಟಿಯಲ್ಲಿ ಬಿಇ/ಬಿ.ಟೆಕ್ ನಲ್ಲಿ ಪದವಿ ಪಡೆದಿರಬೇಕು. ಇನ್ನೂ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿಎಸ್/ಐಟಿಯಲ್ಲಿ ಬಿಇ/ಬಿ.ಟೆಕ್, ಎಂಸಿಎ, ಎಂ.ಟೆಕ್, ಎಂ.ಎಸ್ಸಿ ಪದವಿ ಉತ್ತೀರ್ಣರಾಗಿರಬೇಕು ಎಂದು ತಿಳಿಸಿದೆ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ತಿಳಿಸಿದೆ.

ಮಾಸಿಕ ವೇತನ ಮಾಹಿತಿ
ಸೀನಿಯರ್ ಪ್ರೋಗ್ರಾಮರ್ ಹುದ್ದೆಗೆ: ಮಾಸಿಕ 1 ಲಕ್ಷ ರೂ.ನಿಂದ 2 ಲಕ್ಷ ರೂ.
ಪ್ರೋಗ್ರಾಮರ್: ಮಾಸಿಕ 45,000 ರೂಪಾಯಿ
ಜೂನಿಯರ್ ಪ್ರೋಗ್ರಾಮರ್: ಮಾಸಿಕ 25,000 ರೂಪಾಯಿ
ಆಯ್ಕೆ-ಪೋಸ್ಟಿಂಗ್ ವಿವರ
ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ. ಬದಲಾಗಿ ಪ್ರಾಕ್ಟಿಕಲ್ ಟೆಸ್ಟ್ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳ ಸಹಿತ ಈ ಇ-ಮೇಲ್ ವಿಳಾಸಕ್ಕೆ [email protected] ಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು. ಕೊನೆ ದಿನಾಂಕದೊಳಗೆ ಕಾಯದೇ ಇಂದೇ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ ದಿನ : 2024 ಮಾರ್ಚ 04
ಅರ್ಜಿ ಸಲ್ಲಿಸಲು ಕೊನೆಯ ದಿನ: 2024 ಮಾರ್ಚ್ 12
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಈ ಅಧಿಕೃತ https://cetonline.karnataka.gov.in/kea/ ಗೆ ಭೇಟಿ ನೀಡಬೇಕು. ಕೊನೆ ದಿನಾಂಕ ವರೆಗೂ ಕಾಯದೇ ಈ ಕೂಡಲೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಕೋರಲಾಗಿದೆ.












Click it and Unblock the Notifications