KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ನೇಮಕಾತಿ ವಿವರ
ಬೆಂಗಳೂರು, ನವೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ಶುಕ್ರವಾರವಷ್ಟೇ ದಿನಾಂಕ ವಿಸ್ತರಣೆ ಮಾಡಿ ಮಾಹಿತಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡುವ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಕೆಇಎ ಗುಡ್ ನ್ಯೂಸ್ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆಸಕ್ತ ಅಭ್ಯರ್ಥಿಗಳಿಗೆ ಸದರಿ ಹುದ್ದೆಗಳ ಭರ್ತಿಗೆ ಮುಂದಾಗಿತ್ತು. ಇದೀಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 14ರವರೆಗೆ ವಿಸ್ತರಣೆ ಮಾಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ಸುಮಾರು 14 ದಿನಗಳ ಸಮಯಾವಕಾಶ ಅಭ್ಯರ್ಥಿಗಳಿಗೆ ಸಿಕ್ಕಂತಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 33 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.. ವ್ಯವಸ್ಥಾಪಕರು (ಗ್ರೂಪ್ ಎ, 4 ಹುದ್ದೆಗಳು), ಸಹಾಯಕ ವ್ಯವಸ್ಥಾಪಕರು (ಗ್ರೂಪ್ ಬಿ, 5 ಹುದ್ದೆ), ಹಿರಿಯ ಸಹಾಯಕರು (ಗ್ರೂಪ್ ಸಿ, 5 ಹುದ್ದೆ), ಕಿರಿಯ ಸಹಾಯಕರು (ಗ್ರೂಪ್ ಸಿ, 13 ಹುದ್ದೆ), ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್- ಗ್ರೂಪ್ ಎ, 1 ಹುದ್ದೆ), ಸಹಾಯಕ ಅಭಿಯಂತರರು (ಸಿವಿಲ್- ಗ್ರೂಪ್ ಬಿ, 3 ಹುದ್ದೆ), ಸಹಾಯಕ ಅಭಿಯಂತರರು (ವಿದ್ಯುತ್- ಗ್ರೂಪ್ ಬಿ, 2 ಹುದ್ದೆ) ಇವುಗಳಿಗೆ ಅರ್ಜಿ ಆಹ್ವಾನಿಸಿದೆ.
ಪ್ರಾಧಿಕಾರವು ಹೊರಡಿಸಿದ್ದ ಅಕ್ಟೋಬರ್ 8ರಂದು ಅಧಿಸೂಚನೆ ಹೊರಡಿಸಿತ್ತು. ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆಗಳ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 14ರವರೆಗೆ ಅವಕಾಶವಿದೆ. ಅಭ್ಯರ್ಥಿಗಳು ಶುಲ್ಕವನ್ನು ನವೆಂಬರ್ 15ರೊಳಗೆ ಪಾವತಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಜಿಸಿಇಟಿ ಆಯ್ಕೆ ದಾಖಲಾತಿ ದಿನಾಂಕ ವಿಸ್ತರಣೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) UGCET-25 ಕೃಷಿ ವಿಜ್ಞಾನ ಹಾಗೂ ಪಶು ಸಂಗೋಪನೆ ಕಾಲೇಜುಗಳ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸಲು ಇದ್ದ ಕೊನೆ ದಿನಾಂಕವನ್ನು ನವೆಂಬರ್ 4ರಂದು ಬೆಳಿಗ್ಗೆ 11 ಗಂಟೆವರೆಗೆ ವಿಸ್ತರಣೆ ಮಾಡಿದೆ. ಎರಡು ಕೃಷಿ ಮತ್ತು ತೋಟಗಾರಿಕೆ ಕಾಲೇಜುಗಳ ಪ್ರವೇಶಕ್ಕೆ ಹೊಸದಾಗಿ 63 ಸೀಟು ಮಂಜೂರಾಗಿರುವ ಕಾರಣ ಈ ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡದ ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿಗೆ 21 ಸೀಟು ಹಾಗೂ ದಾವಣಗೆರೆಯ ಎಸ್.ಎಸ್.ಕೃಷಿ ಮತ್ತು ತೋಟಗಾರಿಕೆ ಕಾಲೇಜಿಗೆ 42 ಸೀಟು ಮಂಜೂರಾಗಿದೆ. ಸೀಟ್ ಮ್ಯಾಟ್ರಿಕ್ಸ್ ಅನ್ನು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕೋರ್ಸ್ ಗಳ ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಇಚ್ಛಿಸುವವರು ₹35 ಸಾವಿರ ಮುಂಗಡ ಪಾವತಿ ಮಾಡಬೇಕು. ಸೀಟು ಹಂಚಿಕೆ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಪ್ರಾಧಿಕಾರ ತಿಳಿಸಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications